ಪಾಕಿಸ್ತಾನದ ಕರಾಚಿಯಲ್ಲಿ ದಾವೂದ್ ಇಬ್ರಾಹಿಂ 2ನೇ ಮದುವೆ : ಮಾಹಿತಿ ಬಹಿರಂಗಪಡಿಸಿದ ದಾವೂದ್ ಸಹೋದರಿಯ ಪುತ್ರ

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನಿ ಮಹಿಳೆಯನ್ನು ಎರಡನೇ ಮದುವೆಯಾಗಿದ್ದು, ವಾಂಟೆಡ್ ಕ್ರಿಮಿನಲ್ ಕರಾಚಿಯ ಡಿಫೆನ್ಸ್ ಏರಿಯಾದಲ್ಲಿರುವ ಹೊಸ ಮನೆಗೆ ಸ್ಥಳಾಂತರಗೊಂಡಿದ್ದಾನೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಡೆಸಿದ ವಿಚಾರಣೆ ವೇಳೆ ದಾವೂದ್‌ನ ಮೃತ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಇಬ್ರಾಹಿಂ ಪಾರ್ಕರ್ ಈ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ದಾವೂದ್ ಇಬ್ರಾಹಿಂನ ಎರಡನೇ … Continued

ಕಾಶ್ಮೀರದ ಬುದ್ಗಾಮ್‌ನಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: “ಕಾಶ್ಮೀರದ ಬುದ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರೊಂದಿಗೆ ಸಂಬಂಧ ಹೊಂದಿದ್ದರು” ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯಕುಮಾರ ಮಂಗಳವಾರ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ಪಡೆದ ನಂತರ ಸೈನಿಕರು ಬುದ್ಗಾಮ್‌ನಲ್ಲಿ ಮೊಬೈಲ್ ವಾಹನ ತಪಾಸಣಾ ಕೇಂದ್ರವನ್ನು ಸ್ಥಾಪಿಸಿದ್ದಾರೆ ಎಂದು ಸೇನಾ … Continued

ಯಲ್ಲಾಪುರ: ಅರಬೈಲ್ ಬಳಿ ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ, ಚಾಲಕ, ಕ್ಲೀನರ್ ಪಾರು | ವೀಕ್ಷಿಸಿ

ಯಲ್ಲಾಪುರ: ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಹುಬ್ಬಳ್ಳಿ ಕಡೆಯಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರು ಕಡೆ ಹೊರಟಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಸುದ್ದಿ ತಿಳಿದಿ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕದವರು ಧಾವಿಸಿ ಬಂದರೂ ದಹಿಸುವ … Continued

‘ಭಾರತದ ಜೊತೆಗಿನ ಮೂರು ಯುದ್ಧಗಳಿಂದ ಪಾಕಿಸ್ತಾನ ಪಾಠ ಕಲಿತಿದೆ, ಈಗ ಶಾಂತಿ ಬೇಕು’: ‘ಮಾತುಕತೆ’ಗೆ ಪ್ರಧಾನಿ ಮೋದಿಗೆ ಪಾಕ್ ಪ್ರಧಾನಿ ಸಂದೇಶ

ನವದೆಹಲಿ: ಭಾರತದೊಂದಿಗೆ ಮೂರು ಯುದ್ಧಗಳ ನಂತರ ದೇಶವು ತನ್ನ ಪಾಠವನ್ನು ಕಲಿತಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಒಪ್ಪಿಕೊಂಡಿದ್ದಾರೆ ಮತ್ತು ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆ ಎಂದು ಒತ್ತಿ ಹೇಳಿದ್ದಾರೆ. ಆಹಾರದ ಬೆಲೆಗಳು ಗಗನಕ್ಕೇರಿದ್ದು, ಆರ್ಥಿಕ ಬಿಕ್ಕಟ್ಟಿನೊಂದಿಗೆ ಹೆಣಗಾಡುತ್ತಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಂದರ್ಶನವೊಂದರಲ್ಲಿ ಪಾಕಿಸ್ತಾನವು ಹಿಂದಿನ ಯುದ್ಧಗಳಿಂದ ಪಾಠಗಳನ್ನು ಕಲಿತಿದೆ ಮತ್ತು ಭಾರತದೊಂದಿಗೆ … Continued

ಪಕ್ಷದ ಸಹೋದ್ಯೋಗಿಯನ್ನು ನೆನೆಸಿಕೊಂಡು ಪತ್ರಿಕಾಗೋಷ್ಠಿಯಲ್ಲೇ ಗಳಗಳನೆ ಅತ್ತ ಕೇಂದ್ರ ಸಚಿವ

ಪಾಟ್ನಾ: ಬಕ್ಸರ್‌ನಲ್ಲಿ ಸೋಮವಾರ ನಿಧನರಾದ ಭಾರತೀಯ ಜನತಾ ಪಕ್ಷದ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪರಶುರಾಮ ಚತುರ್ವೇದಿ ಅವರನ್ನು ಸ್ಮರಿಸುವಾಗ ಕೇಂದ್ರ ರಾಜ್ಯ ಸಚಿವ (MoS) ಅಶ್ವಿನಿ ಚೌಬೆ ಅವರು ಸೋಮವಾರ ಕ್ಯಾಮರಾ ಮುಂದೆಯೇ ಗಳಗಳನೆ ಅತ್ತರು. “ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲಿ ರೈತ ಸಂಬಂಧಿ ಸಮಸ್ಯೆಗಳನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹದಲ್ಲಿ … Continued

ಭಾರತಕ್ಕೆ ದೊಡ್ಡ ಯಶಸ್ಸು…: ಚೀನಾ ತಾಂತ್ರಿಕ ತಡೆ ಹಿಂಪಡೆದ ನಂತರ ಪಾಕ್ ಮೂಲದ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ: ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಯಶಸ್ಸು ಎಂದು ವಿವರಿಸಬಹುದಾದ ಬೆಳವಣಿಗೆಯೊಂದರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಸೋಮವಾರ ರಾತ್ರಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ಸಮಿತಿ ಎಂದೂ ಕರೆಯಲ್ಪಡುವ ನಿರ್ಬಂಧಗಳ ಸಮಿತಿಯ ಅಡಿಯಲ್ಲಿ ಮಕ್ಕಿಯನ್ನು ಪಟ್ಟಿ ಮಾಡುವ ಪ್ರಸ್ತಾಪವನ್ನು … Continued

ಸಹಕಾರಿ ಧುರೀಣ, ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ

ಸಾಗರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಸಹಕಾರಿ ಧುರೀಣ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಇಂದು, ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು, ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ತಿಮ್ಮಪ್ಪ ಅವರ ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು … Continued

ಶಿವಮೊಗ್ಗ: ವಸತಿ ಶಾಲೆಯಲ್ಲಿ ಊಟ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದ ವರದಿಯಾಗಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಸೋಮವಾರ ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥಗೊಂಡರು. … Continued