ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಸ್ಟಾರ್ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್; ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ನವದೆಹಲಿ : ಭಾರತದ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸ್ಟಾರ್ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಬುಧವಾರ, ಜನವರಿ 18 ರಂದು ಆರೋಪಿಸಿದ್ದಾರೆ. ‌
ಬಜರಂಗ್ ಪುನಿಯಾ, ಸಂಗೀತಾ ಫೋಗಟ್, ಸೋನಮ್ ಮಲಿಕ್, ಅಂಶು ಮಲಿಕ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟು ಜಂತರ್ ಮಂತರ್‌ನಲ್ಲಿ ಫೆಡರೇಶನ್ ಕಾರ್ಯವೈಖರಿಯ ವಿರುದ್ಧ ಪ್ರತಿಭಟನೆ ನಡೆಸಿದರು.
ನವದೆಹಲಿಯ ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಕ್ರೀಡಾ ಸಂಸ್ಥೆಯ ವಿರುದ್ಧ ದೇಶದ ಸ್ಟಾರ್ ಕುಸ್ತಿಪಟುಗಳು ಪ್ರತಿಭಟಿಸುತ್ತಿದ್ದಂತೆ ಫೋಗಟ್ ಈ ಆರೋಪ ಮಾಡಿದ್ದಾರೆ.
ವಿನೇಶ್ ಫೋಗಟ್ ಅವರು ಬ್ರಿಜ್ ಭೂಷಣ್‌ ಅವರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. ಆತ್ಮಹತ್ಯೆಗೆ ಯೋಚಿಸಿದ್ದೆ. ಲೈಂಗಿಕ ಕಿರುಕುಳದ ವಿರುದ್ಧ ಮಾತನಾಡಿದ್ದಕ್ಕಾಗಿ ಈ ಹಿಂದೆ ನನ್ನನ್ನು ಮೌನವಾಗಿಸಿದ್ದರು ಎಂದು ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಕುಸ್ತಿಪಟು ಹೇಳಿದ್ದಾರೆ.
ನವದೆಹಲಿಯ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ 31 ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿರುವಾಗ ವಿನೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಣ್ಣೀರಿಟ್ಟರು. ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಆಡಳಿತದಲ್ಲಿ ಬದಲಾವಣೆ ತರಬೇಕು ಎಂದು ಒತ್ತಾಯಿಸಿದರು ಹಾಗೂ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಕೂಡ ಆಗಿದ್ದಾರೆ. .
ನಾನು ಅದರ ವಿರುದ್ಧ ಮಾತನಾಡಿದ್ದೇನೆ. ಬ್ರಿಜ್ ಭೂಷಣ್‌ ಶರಣ್‌ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು,” ಎಂದು ವಿನೇಶ್ ಬುಧವಾರ ಹೇಳಿದ್ದಾರೆ. ಗಾಯಗಳಿಗೆ ಯಾರೂ ಜವಾಬ್ದಾರರಾಗಿರುವುದಿಲ್ಲ. ಅವರು ಕುಸ್ತಿಪಟುಗಳನ್ನು ನಿಷೇಧಿಸುವ ಬಗ್ಗೆ ಮಾತನಾಡುತ್ತಾರೆ. ಡಬ್ಲ್ಯುಎಫ್‌ಐ (WFI) ಅಧ್ಯಕ್ಷರು ನನ್ನನ್ನು ಖೋಟಾ ಸಿಕ್ಕಾ (ನಿಷ್ಪ್ರಯೋಜಕ) ಎಂದು ಕರೆದರು, ನಾನು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದೆ” ಎಂದು ಅವರು ಹೇಳಿದರು.
ಪ್ರಾಣ ಬೆದರಿಕೆ: ವಿನೇಶ್
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೂರು ನೀಡಿದ್ದಕ್ಕಾಗಿ ತನಗೆ ಜೀವ ಬೆದರಿಕೆ ಇದೆ ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಕಿರುಕುಳದ ಬಗ್ಗೆ ನಾನು ಪ್ರಧಾನಿಗೆ ದೂರು ನೀಡಿದಾಗಿನಿಂದ ನನಗೆ ಕೊಲೆ ಬೆದರಿಕೆಗಳು ಬಂದಿವೆ ಎಂದು ಅವರು ಹೇಳಿದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸುಮಾರು ಒಂದು ದಶಕದಿಂದ ಡಬ್ಲ್ಯುಎಫ್‌ಐನ ಉಸ್ತುವಾರಿ ವಹಿಸಿದ್ದಾರೆ. 66 ವರ್ಷದ ಅವರು ಮೂರು ವರ್ಷಗಳ ಅವಧಿಗೆ 2019 ರಲ್ಲಿ ಮೂರನೇ ಬಾರಿಗೆ ಡಬ್ಲ್ಯುಎಫ್‌ಐ (WFI) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಕಳೆದ ವರ್ಷ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿರುವ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ತಮ್ಮೊಂದಿಗೆ ಸೇರಲು ಸಾಧ್ಯವಾಗದ ಅನೇಕ ಯುವ ಕುಸ್ತಿಪಟುಗಳ ಮುಖವಾಗಿ ನಾನು ಪ್ರತಿಭಟನಾ ಸ್ಥಳದಲ್ಲಿದ್ದೆ ಎಂದು ಹೇಳಿದರು. “ನಾವು ಎಲ್ಲರಿಗಾಗಿ ಇಲ್ಲಿದ್ದೇವೆ. ನಾವು ಸುತ್ತಮುತ್ತಲಿನ ಅನೇಕ ಯುವಕರ ಮುಖಗಳು” ಎಂದು ಅವರು ಹೇಳಿದರು.
ಹಿಂದಿನ ದಿನ, ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಕುಸ್ತಿಪಟುಗಳಿಗೆ ಕಪಾಳಮೋಕ್ಷ ಮಾಡುತ್ತಾರೆ ಮತ್ತು ಆಗಾಗ್ಗೆ ನಿಂದಿಸುತ್ತಾರೆ ಎಂದು ಆರೋಪಿಸಿದರು. “ನಮ್ಮ ಹೋರಾಟ ಸರ್ಕಾರ ಅಥವಾ ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ವಿರುದ್ಧ ಅಲ್ಲ. ಇದು ಡಬ್ಲ್ಯುಎಫ್‌ಐ ವಿರುದ್ಧ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement