ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಗ್ನಿ ಅವಘಡ :  ಭಾರೀ ಸ್ಫೋಟದ ಸದ್ದು, ಸಲಕರಣೆಗಳು ಬೆಂಕಿಗೆ ಆಹುತಿ

posted in: ರಾಜ್ಯ | 0

ಬೆಳಗಾವಿ : ಜಿಲ್ಲೆಯ ಅಥಣಿಯ ಹೊರವಲಯದ 110 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇಂದು ಗುರುವಾರ ಬೆಳಿಗ್ಗೆ ಭಾರಿ ಬೆಂಕಿ ಅವಘಡ ಸಂಭವಿಸಿ ವಿದ್ಯುತ್ ಟಿಸಿ ಸೇರಿದಂತೆ ಸಲಕರಣೆಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂ. ಹಾನಿ ಸಂಭವಿಸಿದ ವರದಿಯಾಗಿದೆ.
ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಕೆಎಬಿ ಕೇಂದ್ರದಲ್ಲಿ ಇಂದು, ಗುರುವಾರ ಬೆಂಕಿ ಅವಘಡದಲ್ಲಿ ಭಾರಿ ಶಬ್ದದೊಂದಿಗೆ ಕೆಇಬಿ ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡಿದೆ. ಶಬ್ದ ಬರುತ್ತಿದ್ದಂತೆ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ವಿದ್ಯುತ್‌ ಪೂರೈಕೆಯನ್ನು ಸ್ಥಗಿತಗೊಳಿಸಿದರು. ಬೆಂಕಿ ಕೆನ್ನಾಲಿಗೆ ವಿದ್ಯುತ್‌ ಸಲಕರಣೆಗಳು ಸುಟ್ಟು ಕರಕಲಾಗಿದೆ.
ವಿಜಯಪುರ-ಅಥಣಿ ಮಾರ್ಗದ ಪಕ್ಕದಲ್ಲಿರುವ ೧೧೦ ಕೆಎಬಿ ಕೇಂದ್ರದಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ಬಾರಿ ಪ್ರಮಾಣದ ಬೆಂಕಿ ಜೊತೆಗೆ ಸ್ಫೋಟದಿಂದಾಗಿ ಪಟ್ಟಣದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಮಾಹಿತಿ ತಿಳಿಸಿದ ತಕ್ಷಣವೇ ಆಗಮಿಸಿದ ಪೊಲೀಸರು ಕೆಲವು ಗಂಟೆಗಳ ಕಾಲ ವಿಜಯಪುರ- ಅಥಣಿ ರಸ್ತೆ ಬಂದ್ ಮಾಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಹಾವೇರಿ ಕಾಂಗ್ರೆಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೇಮಠ ರಾಜೀನಾಮೆ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement