ಕಾರು-ಟ್ರಕ್ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿ 9 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ರೆಪೋಲಿ ಪ್ರದೇಶದಲ್ಲಿ ಗೋವಾ-ಮುಂಬೈ ಹೆದ್ದಾರಿಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೊಂದು ಮಗು ಗಾಯಗೊಂಡಿದೆ.
ಮೃತರಲ್ಲಿ ಐವರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ರಾಯಗಢ ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ ರಾಯಗಢದ ರೆಪೋಲಿ ಗ್ರಾಮದಲ್ಲಿ ಮುಂಜಾನೆ 4:45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಎಲ್ಲರೂ ಸಂಬಂಧಿಕರು ಹಾಗೂ ವ್ಯಾನ್‌ (ಕಾರು)ನಲ್ಲಿ ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ಹೋಗುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ. ಟ್ರಕ್ ಮುಂಬೈ ಕಡೆಗೆ ಹೋಗುತ್ತಿತ್ತು ಎಂದು ಅವರು ಹೇಳಿದರು.
ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ಕು ವರ್ಷದ ಬಾಲಕಿಯನ್ನು ಮಂಗಾಂವ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಏಷ್ಯನ್ ಗೇಮ್ಸ್ 2023: ಮೊದಲ ದಿನವೇ 5 ಪದಕ ಗೆದ್ದ ಭಾರತ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement