ದಾರುಣ ಘಟನೆ: ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣು

ತುಮಕೂರು: ಜಿಲ್ಲೆಯಲ್ಲಿ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 9 ದಿನಗಳ ನಂತರ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಶವ ಕೊಳೆತು ದುರ್ವಾಸನೆ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿಯ ಬರಕನಹಾಲ್ ತಾಂಡ್ಯದ ರಂಜಿತಾ (24), ಚಂದನಾ (21 ) ಹಾಗೂ ಬಿಂದು (18) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರಾಗಿದ್ದು, ಗುರುವಾರ ಪ್ರಕರಣ ಬೆಳಕಿಗೆ ಬಂದಿದೆ.
ಚಿಕ್ಕ ವಯಸ್ಸಿನಲ್ಲಿಯೇ ತಂದೆ-ತಾಯಿ ಕಳೆದುಕೊಂಡು ಅಜ್ಜಿಯ ಆಶ್ರಯದಲ್ಲಿದ್ದ ಮೂವರು ಯುವತಿಯರು ಅಜ್ಜಿಯೊಂದಿಗೆ ಬೆಳೆದಿದ್ದರು. ಕೆಲ ದಿನಗಳ ಹಿಂದೆ ಅಜ್ಜಿಯೂ ಮೃತಪಟ್ಟ ನಂತರ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.
ಬಾಲದೇವರ ಹಟ್ಟಿಯಿಂದ ಬರಕನಾಲ್ ತಾಂಡ್ಯಕ್ಕೆ ಹೋಗುವ ದಾರಿಯ ರಸ್ತೆ ಬದಿಯಲ್ಲಿರುವ ಒಂಟಿ ಮನೆಯಲ್ಲಿ ಒಂಭತ್ತು ದಿನದ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂದು ಊಹಿಸಲಾಗಿದೆ. ಮೃತದೇಹಗಳು ಕೊಳೆತು ವಾಸನೆ ಬಂದ ನಂತರ ಸ್ಥಳೀಯರು ಅನುಮಾನದ ಮೇಲೆ ಮನೆಯ ಹೆಂಚು ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಇರುವುದನ್ನು ಕಂಡು ಪೊಲೀಸರಿಗೆ ತಿಳಿಸಿದ್ದಾರೆ. ಈ ಘಟನೆ ಕುರಿತು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement