ಪ್ರಾಯೋಗಿಕ ಪರೀಕ್ಷೆ ವೇಳೆ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ…!

ದೆಹಲಿ: ಗುರುವಾರದಂದು ನಡೆಯುತ್ತಿದ್ದ ಪ್ರಾಯೋಗಿಕ ಪರೀಕ್ಷೆಯ ವೇಳೆ ಇನ್ವಿಜಿಲೇಟರ್ ಆಗಿ ನೇಮಕಗೊಂಡಿದ್ದ ದೆಹಲಿ ಸರ್ಕಾರಿ ಶಾಲೆಯ ಶಿಕ್ಷಕನಿಗೆ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದರ್‌ಪುರಿ ಪ್ರದೇಶದಲ್ಲಿನ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಭೂದೇವ್ ಎಂಬ ಶಿಕ್ಷಕನಿಗೆ ವಿದ್ಯಾರ್ಥಿ ಚಾಕು ಇರಿದಿದ್ದಾನೆ. ಹೊಟ್ಟೆಗೆ ಗಾಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ಬಿಎಲ್‌ಕೆ ಕಪೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಲೆಯಲ್ಲಿ ಗುರುವಾರ ನಡೆದ ಪ್ರಾಯೋಗಿಕ ಪರೀಕ್ಷೆಯಲ್ಲಿ ಭೂದೇವ್ ಅವರನ್ನು ಇನ್ವಿಜಿಲೇಟರ್ ಆಗಿ ನೇಮಿಸಲಾಗಿತ್ತು. ಶಿಕ್ಷಕ ಭೂದೇವ್ ಪ್ರಾಯೋಗಿಕ ಪರೀಕ್ಷೆ ಬಗ್ಗೆ ಪರೀಕ್ಷಿಸಲು ಶಾಲೆಗೆ ಭೇಟಿ ನೀಡಿದ್ದರು. ಹಲವು ಬಾರಿ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. 12ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಇನ್ನೂ ಇಬ್ಬರು ವಿದ್ಯಾರ್ಥಿಗಳು ಭಾಗಿಯಾಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. “ಬಾಲಾಪರಾಧಿಯನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಆತ ಅಪರಾಧ ಕೃತ್ಯಕ್ಕೆ ಬಳಸಿದ ಚಾಕುವನ್ನು ಸಹ ವಶಪಡಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

3.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement