‘ನ್ಯಾಯ ಬೇಕು ಮೋದಿ’ ಪೋಸ್ಟರ್ ಅಭಿಯಾನದಲ್ಲಿ ಪ್ರಧಾನಿಗೆ 12 ಪ್ರಶ್ನೆ ಕೇಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ..

ಬೆಂಗಳೂರು: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಕಲಬುರಗಿ ಹಾಗೂ ಯಾದಗಿರಿಗೆ ಗುರುವಾರ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 12 ಪ್ರಶ್ನೆಗಳನ್ನು ಕೇಳಿದ್ದಾರೆ.
ʻನ್ಯಾಯ ಬೇಕು ಮೋದಿʼ ಎಂದು ರಾಜ್ಯದ ಪಿಎಸ್‌ಐ ಹಗರಣ ಸೇರಿದಂತೆ ರಾಜ್ಯದ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರಧಾನಿಗಳಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಸಿದ್ದರಾಮಯ್ಯ ಪ್ರಧಾನಿ ಮೋದಿ ಮುಂದಿಟ್ಟ 12 ಪ್ರಶ್ನೆಗಳು
* 40% ಕಮಿಷನ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯ ಹಣ ನೀಡದೆ ಸತಾಯಿಸಿದ ನಿಮ್ಮ ಬಿಜೆಪಿ ಸರ್ಕಾರದ ಹಣದಾಸೆಗೆ ಗುತ್ತಿಗೆದಾರ ಪ್ರಸಾದ್‌ ಬಲಿಯಾದ. ಈ ಸಾವಿನ ಸರಣಿಯನ್ನು ಕೊನೆಗಾಣಿಸುವವರು ಯಾರು ಮೋದಿ ಅವರೇ?
*ರಸ್ತೆ ಗುಂಡಿಗಳಿಂದ ಸಂಭವಿಸಿದ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಹತ್ತಾರು ಕುಟುಂಬಗಳ ಮಕ್ಕಳಿಗೆ ಹಾಗೂ ಮಕ್ಕಳ ಕಳೆದುಕೊಂಡ ಪೋಷಕರಿಗೆ ನ್ಯಾಯ ಒದಗಿಸಿ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಪ್ರಧಾನಿಗಳೇ.
* ಕಾಲುಬಾಯಿರೋಗ ಮತ್ತು ಚರ್ಮಗಂಟು ರೋಗದಿಂದ ಒಂದೂವರೆ ಲಕ್ಷದಷ್ಟು ಜಾನವಾರುಗಳು ಮರಣಹೊಂದಿವೆ. ರೋಗಕ್ಕೆ ಲಸಿಕೆ ಮತ್ತು ಜೀವನಾಧಾರದ ರಾಸುಗಳನ್ನು ಕಳೆದುಕೊಂಡ ರೈತ ಕುಟುಂಬಗಳಿಗೆ ಪರಿಹಾರ ಕೊಡಿಸಿ ಪ್ರಧಾನ ಮಂತ್ರಿಗಳೇ.
* ಕೆ.ಆರ್.ಪುರಂನ ಇನ್ಸ್‌ಪೆಕ್ಟರ್‌ ನಂದೀಶ 80 ಲಕ್ಷ ರೂ. ಲಂಚ ಕೊಟ್ಟು ವರ್ಗಾವಣೆ ಪಡೆದು ಬಂದ ಕಾರಣಕ್ಕೆ ಒತ್ತಡದಿಂದ ಸತ್ತಿದ್ದಾರೆ ಎಂದು ಸ್ವತಃ ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇತರರಿಗೆ ರಕ್ಷಣೆ ನೀಡುವ ಪೊಲೀಸರಿಗೇ ಹೀಗಾದರೆ ಸಾಮಾನ್ಯರ ಗತಿ ಏನು ಮೋದಿ ಅವರೇ?

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

* ಪರೇಶ ಮೇಸ್ತನ ಸಾವನ್ನೂ ತನ್ನ ಭರ್ಜರಿ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ಬಿಜೆಪಿ. ಈಗ ಆತನ ತಂದೆ-ತಾಯಿ ಹಾಗೂ ಕುಟುಂಬಕ್ಕೆ ನ್ಯಾಯ ಬೇಕು.
* ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಹೊಣೆಗೇಡಿತನದಿಂದ ನಾಡಿಗೆ ಬೆಳಕು ಕೊಟ್ಟ ಲಕ್ಷಾಂತರ ಮಂದಿಯ ಬಾಳು ಕತ್ತಲಾಗಿದೆ.
ಶರಾವತಿ ಸಂತ್ರಸ್ತ ಕುಟುಂಬಗಳ ಸಮಸ್ಯೆಗೆ ಸ್ಪಂದಿಸಿ ಪ್ರಧಾನಿಗಳೇ?
* ಕನ್ನಡ ನಾಡಿನ ಹೆಮ್ಮೆಯ ನಂದಿನಿ ಸಂಸ್ಥೆ ಮೇಲೆ ಗುಜರಾತಿನ ಅಮುಲ್ ಕಣ್ಣು ಬಿದ್ದಿದೆ. ನಮ್ಮ ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ವ್ಯಾಪಾರಿ ಬುದ್ಧಿ ಸಾಕು ಮಾಡಿ ಪ್ರಧಾನಿಗಳೇ.
*ಮೆಟ್ರೋ ಪಿಲ್ಲರ್ ಕುಸಿತದಿಂದ ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಅವರ ಎರಡು ವರ್ಷದ ಕಂದಮ್ಮ ವಿಹಾನ್ ಸಾವಿಗೆ ಹೊಣೆ ಯಾರು? ಮುಖ್ಯ ಎಂಜಿನಿಯರ್ ವಿರುದ್ಧ ಕ್ರಮ ಯಾವಾಗ ಪ್ರಧಾನಿಗಳೇ?

* ಸಚಿವರಾಗಿದ್ದ ಈಶ್ವರಪ್ಪ ಅವರಿಗೆ 40% ಕಮಿಷನ್ ನೀಡಲಾಗದೆ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಶರಣಾದರು. ಬದುಕಿದ್ದಾಗಲಂತೂ ನೀವು ಆತನಿಗೆ ನ್ಯಾಯ ಕೊಡಿಸಿಲ್ಲ, ಸತ್ತಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿ ಅವರೇ?
* ಪಿಎಸ್‌ಐ (PSI) ನೇಮಕಾತಿ ಹಗರಣ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ ಪಿಡಬ್ಲ್ಯುಡಿ (PWD) ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲಾ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ?
* ಕೊರೊನಾ ಕಾಲದಲ್ಲಿ ಸ್ಯಾನಿಟೈಜರ್, ಮಾಸ್ಕ್ ನಿಂದ ಹಿಡಿದು ವೆಂಟಿಲೇಟರ್ ವರೆಗೆ ಎಲ್ಲದರಲ್ಲೂ ರಾಜ್ಯ ಸರ್ಕಾರ ಲೂಟಿ ಮಾಡಿದ್ದರಿಂದ ಕನಿಷ್ಠ 3,000 ಕೋಟಿ ಅವ್ಯವಹಾರ ನಡೆದಿದೆ. ಕೊರೊನಾದಿಂದ ಹಾದಿಯಲ್ಲಿ ಬೀದಿಯಲ್ಲಿ ಸತ್ತವರ ಆತ್ಮಗಳು ನ್ಯಾಯಕ್ಕಾಗಿ ನಿಮ್ಮ ಹಾದಿಯನ್ನೇ ಕಾಯುತ್ತಿವೆ ಮೋದಿ ಅವರೇ.
*ಕೋವಿಡ್ ಸಂದರ್ಭದಲ್ಲಿ ಅಗತ್ಯ ಸಲಕರಣೆ ಪೂರೈಕೆ ಮಾಡಿದ್ದ ಗುತ್ತಿಗೆದಾರ ಬಸವರಾಜ ಅಮರಗೋಳ ಅವರಿಗೆ ರಾಜ್ಯ ಸರ್ಕಾರ ಬಿಲ್‌ ಹಣ ನೀಡದೆ ಇರುವುದರಿಂದ ಬೇಸತ್ತು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈತನಿಗೆ ನ್ಯಾಯ ಕೊಡಿಸಿ, ಪ್ರಾಣ ಉಳಿಸಬೇಕಾದವರು ನೀವಲ್ಲವೇ ಮೋದಿ ಅವರೇ?

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

 

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement