ಪಿಎಸ್ಐ ನೇಮಕಾತಿ ಅಕ್ರಮ ಕಿಂಗ್‌ಪಿನ್‌ ಆರ್.ಡಿ.ಪಾಟೀಲ ಪರಾರಿ

posted in: ರಾಜ್ಯ | 0

ಕಲಬುರಗಿ: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಸಿಐಡಿ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡವು ನಗರದ ಅಕ್ಕಮಹಾದೇವಿ ಕಾಲೋನಿಯ ಆರೋಪಿ ರುದ್ರಗೌಡ ಪಾಟೀಲ್ ನಿವಾಸಕ್ಕೆ ಬಂದಿದ್ದು ವಿಚಾರಣೆಗೆ ಮುಂದಾದಾಗ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಗುರುವಾರ ರಾತ್ರಿ ಹಗರಣದ ಆರೋಪಿ ರುದ್ರಗೌಡ ಪಾಟೀಲ್ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ನಿವಾಸದಲ್ಲಿ ಸಿಐಡಿ ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ. ಗುರುವಾರ ಬೆಳಗ್ಗೆ ಆರೋಪಿ ಮನೆ ಮೇಲೆ ಇಡಿ ಅಧಿಕಾರಿಗಳು ಸಹ ದಾಳಿ ಮಾಡಿದ್ದರು.
ಆರೋಪಿ ರುದ್ರಗೌಡ ಪಾಟೀಲ್ ವಿರುದ್ಧ ತುಮಕೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ವಿಚಾರಣೆ ನಡೆಸಲು ಪೊಲೀಸರು ಆತನನ್ನು ಬಂಧಿಸಲು ನಗರಕ್ಕೆ ಆಗಮಿಸಿದ್ದು ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಪಿಎಸ್‌ಐ ಹಗರಣ:
ಸಿಐಡಿ ತಂಡದ ಪಿಎಸ್‌ಐ ಆನಂದ ನೇತೃತ್ವದಲ್ಲಿ ಪೊಲೀಸರು ಆರೋಪಿ ರುದ್ರಗೌಡ ಪಾಟೀಲ್ ಬಂಧಿಸಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಆನಂದ್ ತಳ್ಳಿ ಆರೋಪಿ ಪರಾರಿಯಾಗಿದ್ದು, ಸಿಐಡಿ ಪೊಲೀಸರು ಈ ಕುರಿತು ನಗರದ ಅಶೋಕ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ನೇಮಕಾತಿ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಹಗರಣ ಬೆಳಕಿಗೆ ಬಂದ ಬಳಿಕ ಪರಾರಿಯಾಗಿದ್ದ. ಬಳಿಕ ಹಗರಣದ ತನಿಖೆ ಕೈಗೊಂಡ ಸಿಐಡಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಆತನನ್ನು ಬಂಧಿಸಿದ್ದರು.ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಆರೋಪಿ ಪದೇ ಪದೇ ವಿಚಾರಣೆಗೆ ಗೈರು ಹಾಜರಾಗಿದ್ದನು.
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಅಭ್ಯರ್ಥಿಗಳಿಗೆ ತನ್ನ ಸಹಚರರ ಮೂಲಕ ಬ್ಲೂ ಟುಥ್ ಡಿವೈಸ್ ಅನ್ನು ರುದ್ರಗೌಡ ಪಾಟೀಲ್ ನೀಡಿ ಲಕ್ಷಾಂತರ ಹಣವನ್ನು ಪಡೆಯುತ್ತಿದ್ದ ಎಂಬುದು ಆರೋಪವಾಗಿದೆ.ಈ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಹ ನಡೆದಿರುವುದರಿಂದ ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ಕೈಗೊಂಡಿದ್ದು, ಗುರುವಾರ ಇ.ಡಿ. ರುದ್ರಗೌಡ ಮನೆ ಮೇಲೆ ದಾಳಿ ಮಾಡಿತ್ತು.
ಇದಲ್ಲದೆ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಆರ್.ಡಿ.ಪಾಟೀಲ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ನೆರೆಯ ತೆಲಂಗಾಣ ರಾಜ್ಯದ ನಾಮಫಲಕ ಹೊಂದಿದ ವಾಹನಗಳಲ್ಲಿ ಬಂದಿದ್ದರು. ಪಿಎಸ್‌ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಭ್ಯರ್ಥಿಗಳಿಂದ ಪಡೆದ ಹಣದ ದಾಖಲೆಗಳು, ಇತರೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಂತರ ರಾತ್ರಿ ಸಿಐಡಿ ಪೊಲೀಸರು ಬಂಧಿಸಲು ಬಂದಾಗ ಆತ ಮನೆಯಿಂದ ಪರಾರಿಯಾಗಿದ್ದಾನೆ.

ಇಂದಿನ ಪ್ರಮುಖ ಸುದ್ದಿ :-   ಚುನಾವಣಾ ಅಕ್ರಮ: ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement