ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆ, ಶನಿವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ವಿಜಯಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ, ನಾಳೆಯಿಂದ ವಿಜಯ ಸಂಕಲ್ಪ ಅಭಿಯಾನ ಆರಂಭಿಸುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯಪುರದ ನಾಗಠಾಣಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ನಾಳೆ, ಶನಿವಾರ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲ್ಬುರ್ಗಿಗೆ ಆಗಮಿಸುವ ಅವರು ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ.ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದು, ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಈ ಸಂದರ್ಭದಲ್ಲಿ ಹಾಜರಿರುವರು.
ನಂತರ ಅವರು ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನಕೆ ಚಾಲನೆ ನೀಡಲಿದ್ದಾರೆ. ಮತದಾರರ ಮನೆಮನೆಗೆ ಭೇಟಿ, ಕರಪತ್ರ ವಿತರಣೆ, ಗೋಡೆ ಬರಹ, ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನದಲ್ಲೂ ಪಾಲ್ಗೊಳ್ಳಲಿದ್ದಾರೆ.
ಬಳಿಕ ಸಿಂಧಗಿಗೆ ತೆರಳಲಿರುವ ಅಲ್ಲಿ ಆರ್.ಡಿ.ಕಾಲೇಜು ಮುಂಭಾಗದ ಚೌಧರಿ ಲೇಔಟ್‍ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement