ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ; ಕೇಂದ್ರ ಸರ್ಕಾರದ ತನಿಖೆಯ ಭರವಸೆ ನಂತರ ಧರಣಿ ಕೈಬಿಟ್ಟ ಕುಸ್ತಿಪಟುಗಳು

ನವದೆಹಲಿ: ಕೇಂದ್ರ ಸರ್ಕಾರದ ತನಿಖೆ ಭರವಸೆ ಹಿನ್ನೆಲೆಯಲ್ಲಿ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ನಡೆಸುತ್ತಿದ್ದ ಧರಣಿಯನ್ನು ಶನಿವಾರ ಅಂತ್ಯಗೊಳಿಸಿದ್ದಾರೆ.
ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತನಿಖೆ ನಡೆಯುವವರಿಗೆ ತಮ್ಮ ಸ್ಥಾನದಿಂದ ಕೆಳಗಿಳಿಯುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನ ಶುಕ್ರವಾರ ರಾತ್ರಿ ಕೈಬಿಟ್ಟಿದ್ದಾರೆ.
ಬಜರಂಗ್ ಪುನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಸೇರಿದಂತೆ ಹಲವಾರು ಕುಸ್ತಿಪಟುಗಳು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಶುಕ್ರವಾರ ರಾತ್ರಿ ಎರಡನೇ ಸುತ್ತಿನ ಮಾತುಕತೆಯ ನಡೆಸಿದ ನಂತರ ಎರಡು ದಿನಗಳಿಂದ ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆಸುತ್ತಿದ್ದ ಧರಣಿ ಕೈಡಲಾಗಿದೆ. ಮಾತುಕತೆ ವೇಳೆ ಸರ್ಕಾರ ಹೋರಾಟಗಾರರು ಮಾಡಿದ ಆರೋಪಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದೆ. ಆರೋಪಗಳ ತನಿಖೆಗೆ ಮೇಲುಸ್ತುವಾರಿ ಸಮಿತಿ ರಚಿಸಲಾಗುವುದು. ಆರೋಪಗಳ ತನಿಖೆ ಮಾಡುವವರೆಗೆ ಡಬ್ಲ್ಯುಎಫ್‌ಐ ಮುಖ್ಯಸ್ಥರು ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ವಿಶ್ವದ ಟಾಪ್‌- 20 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಗೌತಮ್ ಅದಾನಿ

ಮೇಲುಸ್ತುವಾರಿ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿ ಸದಸ್ಯರ ಹೆಸರುಗಳನ್ನು ನಾಳೆ ಪ್ರಕಟಿಸಲಾಗುತ್ತದೆ. ಸಮಿತಿ ನಾಲ್ಕು ವಾರಗಳಲ್ಲಿ ತನಿಖೆ ಪೂರ್ಣಗೊಳಿಸಲಿದೆ. ಇದು ಹಣಕಾಸು ಅವ್ಯವಹಾರ ಮತ್ತು ಲೈಂಗಿಕ ಕಿರುಕುಳದ ಆರೋಪ ಸೇರಿದಂತೆ ಎಲ್ಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಲಿದೆ ಎಂದು ಅನುರಾಗ್ ಠಾಕೂರ್ ಸಭೆ ಬಳಿಕ ಹೇಳಿದ್ದಾರೆ. ತನಿಖೆ ಪೂರ್ಣಗೊಳ್ಳುವವರಗೆ ಸಿಂಗ್ ಅವರು ಹುದ್ದೆಯಿಂದ ಹೊರಗಿದ್ದು, ತನಿಖೆಗೆ ಸಹಕರಿಸಲಿದ್ದಾರೆ. ಮೇಲುಸ್ತುವಾರಿ ಸಮಿತಿ ಡಬ್ಲ್ಯುಎಫ್‍ಐನ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲಿದೆ ಎಂದು ಹೇಳಿದ್ದಾರೆ.
ಏಷ್ಯನ್ ಗೇಮ್ಸ್ ಮತ್ತು ಒಲಂಪಿಕ್ ಅರ್ಹತಾ ಪಂದ್ಯಗಳೊಂದಿಗೆ ಇದು ಪ್ರಮುಖ ವರ್ಷವಾಗಿದೆ. ಹೀಗಾಗಿ ಸರ್ಕಾರದಿಂದ ಭರವಸೆ ಸಿಕ್ಕ ನಂತರ ಪ್ರತಿಭಟನೆ ಅಂತ್ಯಗೊಳಿಸಲು ನಿರ್ಧರಿಸಿದ್ದೇವೆ. ಸಮಿತಿಯು ನಿಷ್ಪಕ್ಷಪಾತ ತನಿಖೆ ನಡೆಸಲಿದೆ ಎಂಬ ವಿಶ್ವಾಸವಿದೆ. ನಮ್ಮ ಸುರಕ್ಷತೆ ತಮ್ಮ ಜವಾಬ್ದಾರಿ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಕುಸ್ತಿ ಪಟುಗಳು ಹೇಳಿದ್ದಾರೆ.

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಗರ್ಭಧರಿಸಿದ ದೇಶದ ಮೊದಲ ತೃತೀಯಲಿಂಗಿ : ಮಾರ್ಚ್‌ನಲ್ಲಿ ತಮ್ಮ ಮಗು ಸ್ವಾಗತಿಸಲು ಸಜ್ಜಾದ ಕೇರಳದ ತೃತೀಯಲಿಂಗಿ ದಂಪತಿ...!

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement