ಜನ ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ: ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ ಪಿಎಸ್‌ಐ ಹಗರಣದ ಆರೋಪಿ

ಕಲಬುರ್ಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಕಳೆದ ಮಧ್ಯರಾತ್ರಿ ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ವೀಡಿಯೊದಲ್ಲಿ ಜನ ಬಯಸಿದರೆ, ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಜನ ಬಯಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.
ನಾನು ಓಡಿ ಹೋಗಿಲ್ಲ. ಮನೆಯಲ್ಲಿಯೇ ಇದ್ದೇನೆ. ಇ.ಡಿ ಅಧಿಕಾರಿಗಳು ಬಂದಾಗ ವಿಚಾರಣೆ ಎದುರಿಸಿದ್ದೇನೆ. ಇ.ಡಿ. ಅಧಿಕಾರಿಗಳು ಬಂದು ಹೋದ ಮೇಲೆ ನಾನು ಹೊರಗೆ ಹೋಗಿದ್ದೆ. ಆಗ ಸಿಐಡಿ ಅಧಿಕಾರಿಗಳು ಮನೆಗೆ ಬಂದಿದ್ದಾರೆ. ಆಗ ನಾನಿರಲಿಲ್ಲ. ನಾನು ಸಿಐಡಿ ಅಧಿಕಾರಿಗಳನ್ನು ತಳ್ಳಿ ಓಡಿ ಹೋಗಿದ್ದೇನೆ ಎನ್ನುವುದು ಸುಳ್ಳು. ನಾನು ಕಾನೂನಿಗೆ ಗೌರವ ಕೊಡುವವನು ಎಂದು ಹೇಳಿದ್ದಾರೆ. ಸಮಾಜ ಸೇವೆ, ಚುನಾವಣೆಗೆ ಬರಬಹುದು ಎಂಬ ಕಾರಣಕ್ಕೆ ನನ್ನನ್ನು ಮತ್ತು ನನ್ನ ಸಹೋದರನನ್ನು ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಸಿಲುಕಿಸಿದ್ದಾರೆ. ಸುಳ್ಳು ಆರೋಪಕ್ಕೆ ನಾನು ಹೆದರುವುದಿಲ್ಲ. ಜನರ ಸೇವೆಗಾಗಿ ನಾನು ಸದಾ ಸಿದ್ಧ. ಜಾಮೀನಿನ ಮೇಲೆ ಬಂದ ಮೇಲೆ ಸಿಐಡಿ ತನಿಖೆಗೆ ಸಹಕರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.ಕೆಲವು ಸಿಐಡಿ ಅಧಿಕಾರಿಗಳು ರಾಜಕೀಯ ಮುಖಂಡರ ಕೈಗೊಂಬೆಯಾಗಿದ್ದಾರೆ. ಯಾರೇ ಕುತಂತ್ರ ಮಾಡಿದರೂ ನನ್ನ ಸಾಮಾಜಿಕ ಸೇವೆ ಮುಂದುವರಿಯಲಿದೆ. ನನ್ನ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ನನ್ನನ್ನ ಬಗ್ಗು ಬಡಿಯುವುದಕ್ಕೆ ಕೆಲ ರಾಜಕೀಯ ನಾಯಕರು ಮುಂದಾಗಿದ್ದಾರೆ. ಇಂತಹ ಹತ್ತು ಪ್ರಕರಣಗಳಲ್ಲಿ ಸಿಲುಕಿಸಿದರೂ ನನ್ನ ಸಾಮಾಜಿಕ ಕಾರ್ಯ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement