ಬೊಲೆರೊ ಡಿಕ್ಕಿ: ಮೂವರು ಮಹಿಳೆಯರು ಸಾವು

ಕಾರವಾರ : ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಸೀತಾವಾಡದಲ್ಲಿ ನಡೆದ ವರದಿಯಾಗಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರದ ಫಾರ್ಲಿಯ ಪಾರ್ವತಿ ಗಾವಡಾ (55), ದುರ್ಗೆ ಕೋಲ್ಸೇಕರ್ (55), ತುಳಸಿ ಗಾವಡಾ (50) ಎಂದು ಗುರುತಿಸಲಾಗಿದೆ. ಬಿಪಿನ್‌ ತಾಳ್ವೆ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ. ಹಿಂಭಾಗದಿಂದ ವೇಗವಾಗಿ ಬಂದ ಮಹಿಂದ್ರ ಬೊಲೆರೊ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ವಾಹನ ತಮಿಳುನಾಡಿನಿಂದ ಗೋವಾಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement