ವೃದ್ಧ ಶಾಲಾ ಶಿಕ್ಷಕರಿಗೆ ಥಳಿಸಿದ ಇಬ್ಬರು ಮಹಿಳಾ ಪೊಲೀಸ್‌ ಸಿಬ್ಬಂದಿ ; ಅಮಾನುಷ ದೃಶ್ಯ ಕ್ಯಾಮರಾದಲ್ಲಿ ಸೆರೆ

ಪಾಟ್ನಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ವೃದ್ಧರೊಬ್ಬರನ್ನು ಅಮಾನುಷವಾಗಿ ಥಳಿಸುತ್ತಿರುವ ವೀಡಿಯೊ ಹೊರಬಿದ್ದಿದೆ. ಸೈಕಲ್‌ ಮೇಲೆ ಹೋಗುತ್ತಿದ್ದಾಗ ಸ್ಕಿಡ್ ಆಗಿ ರಸ್ತೆಯಲ್ಲಿ ಬಿದ್ದ ವೃದ್ಧರೊಬ್ಬರು ತಕ್ಷಣ ಸೈಕಲ್‌ ಅನ್ನು ಎತ್ತಲಿಲ್ಲ ಎಂದು ಇಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳು ಲಾಠಿಯಿಂದ ಹೊಡೆದಿದ್ದಾರೆ. ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ನಡೆದ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
ಪಾಟ್ನಾದಿಂದ 200 ಕಿಮೀ ದೂರದಲ್ಲಿರುವ ಭಭುವಾ ಎಂಬಲ್ಲಿ ಈ ಘಟನೆ ನಡೆದಿದ್ದು, 70 ವರ್ಷದ ನವಲ್ ಕಿಶೋರ್ ಪಾಂಡೆ 40 ವರ್ಷಗಳಿಂದ ಶಿಕ್ಷಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಕೆಲವು ಮಕ್ಕಳಿಗೆ ಪಾಠ ಹೇಳಿಕೊಟ್ಟು ಮನೆಗೆ ಸೈಕಲ್‌ ಮೇಲೆ ಹೋಗುತ್ತಿದ್ದ ಅವರು, ಜನನಿಬಿಡ ಪ್ರದೇಶದಲ್ಲಿ ಹೋಗುವಾಗ ಸೈಕಲ್ ಸ್ಕಿಡ್ ಬಿದ್ದರು. ಇದರಿಂದ ಅವರ ಹಿಂದೆ ಟ್ರಾಫಿಕ್ ಜಾಮ್ ಉಂಟಾಯಿತು. ಕೂಡಲೇ ಇಬ್ಬರು ಮಹಿಳಾ ಕಾನ್ಸ್‌ಟೇಬಲ್‌ಗಳು ಬಂದು ತಕ್ಷಣವೇ ಸೈಕಲ್ ತೆಗೆಯುವಂತೆ ಹೇಳಿದರು. ವೃದ್ಧ ಪಾಂಡೆ ಅವರು ತಕ್ಷಣವೇ ಸೈಕಲ್ ಎತ್ತಲು ಹೆಣಗಾಡಿದರು. ಬಿದ್ದ ಸೈಕಲ್‌ ಅನ್ನು ಎತ್ತಲು ವಿಳಂಬ ಮಾಡಿದರು ಎಂಬ ಕಾರಣಕ್ಕೆ ಅವರಿಗೆ ಥಳಿಸಲಾಗಿದೆ ಎಂದು ಮೂಲ ವಿಡಿಯೋವನ್ನು ಪೋಸ್ಟ್ ಮಾಡಿದ ಪತ್ರಕರ್ತರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ವೀಡಿಯೊದಲ್ಲಿ, ಇಬ್ಬರು ಮಹಿಳಾ ಪೊಲೀಸರು ಸಾರ್ವಜನಿಕ ರಸ್ತೆಯಲ್ಲಿ ವಯಸ್ಸಾದ ವ್ಯಕ್ತಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು. ಮಹಿಳಾ ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಲಾಠಿಯಿಂದ ಹೊಡೆಯುತ್ತಿದ್ದುದರಿಂದ ವೃದ್ಧರು ಹೊಡೆತದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಮುಖ್ಯ ಮಾರ್ಗದಲ್ಲಿ ಸಾಕಷ್ಟು ಜನರು ಹೋಗುತ್ತಿದ್ದರೂ ಶಾಲಾ ನಿವೃತ್ತ ಶಿಕ್ಷಕನ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ತಡೆಯಲು ಮುಂದಾಗದಿರುವುದು ಅಚ್ಚರಿ ಮೂಡಿಸಿದೆ. ಜನರು ಅಡ್ಡಾಡುವುದನ್ನು ಮತ್ತು ಹೊಡೆಯುತ್ತಿರುವುದನ್ನು ವೀಕ್ಷಿಸುವುದನ್ನು ಗಮನಿಸಬಹುದು.

ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಈ ವಿಡಿಯೋವನ್ನು ಟ್ವೀಟ್ ಮಾಡಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಟ್ಯಾಗ್ ಮಾಡಿ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸ್ಥಳೀಯ ವರದಿಗಳ ಪ್ರಕಾರ ಪಾಂಡೆ ಅವರು ಖಾಸಗಿ ಶಾಲೆಯಲ್ಲಿ ಮಕ್ಕಳಿಗೆ ಕಲಿಸಲು ಪ್ರತಿದಿನ ಈ ಪ್ರದೇಶದಲ್ಲಿ ಸೈಕಲ್ ಸವಾರಿ ಮಾಡುತ್ತಾರೆ. ಇಬ್ಬರು ಕಾನ್‌ಸ್ಟೆಬಲ್‌ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಹಾರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement