ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಮಚಂದ್ರ ಹುದ್ದಾರ್‌, ವೆಂಕಟೇಶ ನಾಯಕ್‌ ನೇಮಕ

ಬೆಂಗಳೂರು: ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ರಾಮಚಂದ್ರ ಡಿ. ಹುದ್ದಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ ವೆಂಕಟೇಶ ನಾಯಕ್‌ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಶನಿವಾರ ಅಧಿಸೂಚನೆ ಹೊರಡಿಸಿದೆ.
ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯ ನಾಯ್ಕ್ ಅವರು ಎರಡು ವರ್ಷಗಳ ಕಾಲ ಕರ್ನಾಟಕ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಮೂರ್ತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.ಸುಪ್ರೀಂ ಕೋರ್ಟ್‌ ಕೊಲಿಜಿಯಂ ಜನವರಿ 10ರಂದು ಇಬ್ಬರು ನ್ಯಾಯಾಧೀಶರ ಹೆಸರುಗಳನ್ನು ಶಿಫಾರಸ್ಸು ಮಾಡಿತ್ತು.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ನಿಮ್ಮ ಕಾಮೆಂಟ್ ಬರೆಯಿರಿ

advertisement