ಕನ್ನಡದ ಹೆಸರಾಂತ ನಟ ಲಕ್ಷ್ಮಣ ಹೃದಯಾಘಾತದಿಂದ ನಿಧನ

posted in: ರಾಜ್ಯ | 0

ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ಖಳ ನಟ ಹಾಗೂ ಪೋಷಕ ನಟ ಲಕ್ಷ್ಮಣ ಹೃದಯಾಘಾತದಿಂದಾಗಿ ಇಂದು, ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ಲಕ್ಷ್ಮಣ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಜ.23) ಬೆಳಗ್ಗೆ ಸುಮಾರು 3.30 ಸಮಯದಲ್ಲಿ ಲಕ್ಷ್ಮಣ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಲಕ್ಷ್ಮಣ್‌ ಅವರನ್ನು ನಾಗರಬಾವಿಯ ಜಿ.ಎಂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಲಕ್ಷ್ಮಣ್‌ ಕೊನೆಯುಸಿರೆಳೆದಿದ್ದಾರೆ.  ಮೂಡಲಪಾಳ್ಯದ ಅವರ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಇಂದೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರ ಆಪ್ತರಿಂದ ತಿಳಿದುಬಂದಿದೆ.
300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲಕ್ಷ್ಮಣ ಅವರು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ಲಕ್ಷ್ಮಣ ಪಾತ್ರ ಮಾಡಿದ್ದಾರೆ. ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಡಾ. ಅಂಬರೀಶ್ ಶಂಕನಾಗ್‌ ರವಿಚಂದ್ರನ್, ಶಿವರಾಜಕುಮಾರ್ ಹೀಗೆ ಹಲವಾರು ದಿಗ್ಗಜ ನಟರೊಂದಿಗೆ ಪರದೆ ಅವರು ಹಂಚಿಕೊಂಡಿದ್ದಾರೆ. ಬಹುತೇಕ ಸಿನಿಮಾಗಳಲ್ಲಿ ಅವರು ಖಳನಟನಾಗಿ ಹಾಗೂ ಇನ್‌ಸ್ಪೆಕ್ಟರ್‌ ಪಾತ್ರದಲ್ಲಿ ನಟಿಸಿದ್ದಾರೆ.
ಲಕ್ಷ್ಮಣ ಅವರ ಕುಟುಂಬದಲ್ಲಿ ತಂದೆ ಹಾಗೂ ಸಹೋದರ ಪೊಲೀಸ್ ಆಗಿದ್ದರಿಂದ ಅವರಿಗೂ ಸೈನ್ಯ ಸೇರುವ ಆಸೆ ಇತ್ತಂತೆ. ಆದರೆ ತಾಯಿ ಒಪ್ಪದ ಕಾರಣ ಅವರು ಬಣ್ಣದ ಲೋಕಕ್ಕೆ ಬಂದರು. ರಂಗಭೂಮಿಯಲ್ಲಿ ಕೆಲ ವರ್ಷಗಳ ಕಾಲ ಕೆಲಸ ಮಾಡಿದ ಇವರು ಆರಂಭದಲ್ಲಿ ಫ್ಯಾಕ್ಟರಿಯಲ್ಲೂ ಕೆಲಸ ಮಾಡಿದ್ದಾರೆ. ಬಳಿಕ ಸಿನಿಮಾ ರಂಗಕ್ಕೆ ಕಾಲಿಟ್ಟರು. 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದರು. ವಿಶೇಷವಾಗಿ ಪೋಷಕ ಹಾಗೂ ಖಳ ನಾಯಕನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.ಫ್ಯಾಕ್ಟರಿಯಲ್ಲಿ ಏರ್ಪಡಿಸುತ್ತಿದ್ದ ಕಾರ್ಯಕ್ರಮಗಳಲ್ಲಿ ಲಕ್ಷ್ಮಣ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಅಲ್ಲದೆ, ಕಸರತ್ತು ಮಾಡಿ ಬಾಡಿ ಬಿಲ್ಡ್‌ ಸಹ ಮಾಡಿದ್ದರು. ಮುಂದೆ ಇದೇ ಅವರಿಗೆ ಚಿತ್ರರಂಗದಲ್ಲಿ ಅನುಕೂಲವಾಯಿತು.ಉಷಾ ಸ್ವಯಂವರ’ ಎಂಬ ಚಿತ್ರದ ಮೂಲಕ ಲಕ್ಷ್ಮಣ್‌ ನಾಯಕನಾಗಿ ಚಿತ್ರಂಗಕ್ಕೆ ಬಂದರು. ಆದರೆ ನಂತರದ ಸಿನಿಮಾಗಳಲ್ಲಿ ಅವರು ಖಲನಾಯಕ ಹಾಗೂ ಪೋಷಕ ಪಾತ್ರಗಳಲ್ಲಿ ನಟಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ‌ ಬಳ್ಳಾರಿ ಮೇಯರ್ ಆಗಿ ತ್ರಿವೇಣಿ ಆಯ್ಕೆ : ಇವರು ರಾಜ್ಯದ ಅತ್ಯಂತ ಕಿರಿಯ ಮೇಯರ್

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement