ನಾಳೆ ಸಾರಿಗೆ ಸಂಸ್ಥೆ ನೌಕರರ ಧರಣಿ: ‘ಬಿಎಂಟಿಸಿ’ ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ

ಬೆಂಗಳೂರು : ನಾಳೆ ಮಂಗಳವಾರ (ಜನವರಿ 24) ಬಿಎಂಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಕ್ಕೆ ಕರೆ ನೀಡಿವೆ. ಆದರೆ ಸಾರಿಗೆ ಬಸ್ ಸಾರಿಗೆಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಟಿಸಿ ಮಾಹಿತಿ ನೀಡಿದೆ.
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಂಗಳವಾರ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿರುವ ಸಾರಿಗೆ ನೌಕರರು ಪ್ರತಿಭಟನೆಗೆ ತಯಾರಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ಸಂಚಾರ ವ್ಯತ್ಯಯ ಆಗುವ ಆತಂಕ ಎದುರಾಗಿತ್ತು.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement