ನೆಟೆ ರೋಗದಿಂದ ತೊಗರಿ ಬೆಳೆಗೆ ಹಾನಿ: ರೈತರಿಗೆ ಪರಿಹಾರ ಘೋಷಿಸಿದ ಸರ್ಕಾರ

ಬೆಂಗಳೂರು: ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಯಾದ್ಯಂತ ತೊಗರಿ ಬೆಳೆಗೆ ನೆಟೆರೋಗದಿಂದ ವ್ಯಾಪಕ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೊಗರಿ ಬೆಳೆ ಹಾನಿಯನ್ನು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ಗರಿಷ್ಠ 2 ಹೆಕ್ಟೇರ್​ಗೆ ಸೀಮಿತಗೊಳಿಸಿ 10,000 ರೂಪಾಯಿ ಪರಿಹಾರ ಘೋಷಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ಮಂಗಳವಾರ (ಜನವರಿ … Continued

ಜೆಎನ್‌ಯು ಕ್ಯಾಂಪಸ್‌ನಲ್ಲಿ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸರಣಿ ವೀಕ್ಷಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬಿಬಿಸಿ ಸರಣಿಯನ್ನು ವೀಕ್ಷಿಸುತ್ತಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಒಂದು ವಿಭಾಗದ ವಿದ್ಯಾರ್ಥಿಗಳ ಮೇಲೆ ಮಂಗಳವಾರ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಜೆಎನ್‌ಯು ಆಡಳಿತವು ಕ್ಯಾಂಪಸ್‌ನಲ್ಲಿ ವಿದ್ಯುತ್ ಅನ್ನು ಸ್ಥಗಿತಗೊಳಿಸಿದ ನಂತರ ಕತ್ತಲೆಯ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಸ್ಕ್ರೀನಿಂಗ್ ವೇಳೆ ತಮ್ಮ ಮೇಲೆ ಇಟ್ಟಿಗೆ ಎಸೆಯಲಾಗಿದೆ.ಕ್ಯಾಂಪಸ್‌ನಲ್ಲಿ ವಿದ್ಯುತ್ ಇಲ್ಲದ … Continued

ಆಸ್ಕರ್‌-2023: ಆರ್‌ಆರ್‌ಆರ್‌ ನ ನಾಟು ನಾಟು ಗೀತೆ ಸೇರಿದಂತೆ ಭಾರತದ ಮೂರು ಚಲನಚಿತ್ರಗಳ 3 ನಾಮನಿರ್ದೇಶನ

ನವದೆಹಲಿ: 95ನೇ ಅಕಾಡೆಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಪ್ರಕಟಿಸಲಾಗಿದೆ ಮತ್ತು RRR ಚಿತ್ರದ ನಾಟು ನಾಟು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ. ನಾಟು ನಾಟು ಇತರ ನಾಲ್ಕು ನಾಮನಿರ್ದೇಶಿತ ಹಾಡುಗಳ ವಿರುದ್ಧ ಸ್ಪರ್ಧಿಸಲಿದೆ. “ನಾವು ಇತಿಹಾಸವನ್ನು ರಚಿಸಿದ್ದೇವೆ” ಎಂದು RRR ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಎರಡು ಭಾರತೀಯ ನಿರ್ಮಿತ ಸಾಕ್ಷ್ಯಚಿತ್ರಗಳು … Continued

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್. ಅಶೋಕ ನೇಮಕ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸೀಟು ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಸರ್ಕಾರ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ ಅವರನ್ನು ನೇಮಕ ಮಾಡಿದೆ. ಈ ಹಿಂದೆ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರು ಹಾಸನದ ಜೊತೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಆದರೆ, ಈಗ … Continued

ಪೆಟ್ರೋಲ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ತುಮಕೂರು: ಜಿಲ್ಲೆಯ ತಿಪಟೂರು ನಗರದ ಹಿಂಡಿಸ್ಕೆರೆ ಗೇಟ್ ಬಳಿಯ ಪೆಟ್ರೋಲ್ ಬಂಕ್‌ನ ಟ್ಯಾಂಕ್​ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ನಡೆದ ವರದಿಯಾಗಿದೆ. ಮೃತ ಕಾರ್ಮಿಕರನ್ನು ನಾಗರಾಜು (50), ರವಿ (38) ಎಂದು ಗುರುತಿಸಲಾಗಿದೆ. ಅವರು ಬಂಕ್​ ಸ್ವಚ್ಛಗೊಳಿಸುವಾಗ ಉಸಿರುಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಟ್ಯಾಂಕ್‌ ಸ್ವಚ್ಛಗೊಳಿಸುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ ಕಾರಣ … Continued

ನ್ಯಾಯಾಂಗದಲ್ಲಿ ಸರ್ಕಾರದ ಹಸ್ತಕ್ಷೇಪ ಅಪಾಯಕಾರಿ: ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆ

ಮೈಸೂರು: ನ್ಯಾಯಾಧೀಶರ ನೇಮಕ ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ “ಅಪಾಯಕಾರಿ” ಎಂದು ಮಾಜಿ ಲೋಕಾಯುಕ್ತ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಮಂಗಳವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗಿನ ಸಂವಹನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನ್ಯಾಯಾಂಗದಲ್ಲಿ ಕಾರ್ಯಾಂಗ ಹಸ್ತಕ್ಷೇಪ ಮಾಡಬಾರದು ಎಂದು ಅವರು ಒತ್ತಿಹೇಳಿದ್ದಾರೆ. “ಈ ರೀತಿಯ ಹಸ್ತಕ್ಷೇಪವು ಅಪಾಯಕಾರಿ ಬೆಳವಣಿಗೆಯಾಗಿದೆ” ಎಂದು … Continued

ಬೆಂಗಳೂರಿನ ಕೆ.ಆರ್​ ಮಾರ್ಕೆಟ್ ಮೇಲ್ಸೇತುವೆಯಿಂದ ನೋಟುಗಳನ್ನು ಎಸೆದ ವ್ಯಕ್ತಿ ವಶಕ್ಕೆ

ಬೆಂಗಳೂರು: ಕೆ.ಆರ್​ ಮಾರ್ಕೆಟ್​ನ ಫ್ಲೈಓವರ್ ಮೇಲೆ ನಿಂತು ನೋಟುಗಳನ್ನು ಎಸೆದಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು ಈ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆಗೆ ಇಳಿದ ಪೊಲೀಸರು, ನಾಗಬಾವಿಯ ಯೂ ಟ್ಯೂಬ್​ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಖಚಿತಪಡಿಸಿ ಕಚೇರಿಗೆ ಹೋಗಿ ವಶಕ್ಕೆ ಪಡೆದಿದ್ದಾರೆ. ಹಣ ಎಸೆದ … Continued

4 ಅಂತಸ್ತಿನ ಕಟ್ಟಡ ಕುಸಿತ : ಮೂವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ಲಕ್ನೋ: ಮಂಗಳವಾರ ಲಕ್ನೋದ ವಜೀರ್ ಹಸನ್‌ಗಂಜ್ ರಸ್ತೆಯಲ್ಲಿ ವಸತಿ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರು ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡವು ಹಠಾತ್ತನೆ ಕುಸಿದಿದೆ. ಮೂರು ಮೃತದೇಹಗಳನ್ನು ಪತ್ತೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ … Continued

ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ಆಂಟನಿ ಪುತ್ರ…!

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ಬಿಜೆಪಿ ಮಂಗಳವಾರ ಅನಿರೀಕ್ಷಿತ ವಲಯಗಳಿಂದ ಬೆಂಬಲ ಪಡೆದಿದೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಎ. ಕೆ. ಆಂಟನಿ ಅವರ ಪುತ್ರ ಅನಿಲ್ ಅವರು ಭಾರತೀಯ ಸಂಸ್ಥೆಗಳ ಮೇಲೆ ಬ್ರಿಟಿಷ್ ಪ್ರಸಾರಕರ ಅಭಿಪ್ರಾಯಗಳನ್ನು ಹೇರುವುದರಿಂದ ದೇಶದ ಸಾರ್ವಭೌಮತ್ವಕ್ಕೆ ಹಾನಿಯಾಗುತ್ತದೆ ಎಂದು … Continued

ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ

ಮಂಡ್ಯ : ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಚೆನ್ನರಾಜು ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದಾತ ನಂದನ ಎಂದು ಹೇಳಲಾಗಿದೆ. ಹಲ್ಲೆಯಿಂದಾಗಿ ಚೆನ್ನರಾಜು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಹಲ್ಲೆಗೊಳಗಾದ ಚೆನ್ನಾರಾಜು ಹಾಗೂ … Continued