ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ

posted in: ರಾಜ್ಯ | 0

ಮಂಡ್ಯ : ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಚೆನ್ನರಾಜು ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದಾತ ನಂದನ ಎಂದು ಹೇಳಲಾಗಿದೆ. ಹಲ್ಲೆಯಿಂದಾಗಿ ಚೆನ್ನರಾಜು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯ ಹಲ್ಲೆಗೊಳಗಾದ ಚೆನ್ನಾರಾಜು ಹಾಗೂ ಹಲ್ಲೆ ಮಾಡಿದ ನಂದನ ಇಬ್ಬರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮರಳಿಗ ಗ್ರಾಮದ ನಿವಾಸಿಗಳು. ಜಮೀನು ವ್ಯಾಜ್ಯ ಹಿನ್ನೆಲೆಯಲ್ಲಿ ಅವರು ಮದ್ದೂರು ತಾಲೂಕು ಕಚೇರಿ ಬಂದಿದ್ದರು. ಜಮೀನು ವ್ಯಾಜ್ಯ ಪ್ರಕರಣದಲ್ಲಿ ಚೆನ್ನರಾಜು ಪರ ತೀರ್ಪು ಬರುತ್ತಿದ್ದಂತೆ ಕೋಪಗೊಂಡ ನಂದನ ಚೆನ್ನರಾಜುವಿಗೆ ಖಾರದ ಪುಡಿ ಎರಚಿ ನಂತರ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಅಲ್ಲಿದ್ದವರು ತಪ್ಪಿಸಲು ಪ್ರಯತ್ನಿಸಿದರೂ ನಂದನ ಬಿಡಲಿಲ್ಲ ಎಂದು ಹೇಳಲಾಗಿದೆ. ಕೊನೆಗೆ ಆತನ ಮೇಲೆ ಕಲ್ಲು ತೂರಿ ಚೆನ್ನರಾಜುವನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಮಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಸಿಬ್ಬಂದಿ ಕೊಲೆ

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement