ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣ: 6600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸರು

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಆಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ 6,629 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರೋಪಿ ಅಫ್ತಾಬ್ ಪೂನಾವಾಲಾನನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಅಫ್ತಾಬ್ ಪೂನವಾಲಾ ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಕರ್‌ ಅವರನ್ನು ಕೊಂದು ನಂತರ ಆಕೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ, ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಿ ಮೂರು ತಿಂಗಳ ಕಾಲ ತನ್ನ ಮನೆಯ ಸಮೀಪವಿರುವ ಛತ್ತರ್‌ಪುರ ಅರಣ್ಯ ಪ್ರದೇಶದಲ್ಲಿ ಎಸೆದ ಮಾಡಿದ ಆರೋಪ ಹೊತ್ತಿದ್ದಾನೆ.
6,629 ಪುಟಗಳ ಚಾರ್ಜ್ ಶೀಟ್, 100 ಸಾಕ್ಷಿಗಳ ಸಾಕ್ಷ್ಯಗಳನ್ನು ಒಳಗೊಂಡಿದೆ. ಜೊತೆಗೆ ಪ್ರಕರಣದ ಫೋರೆನ್ಸಿಕ್ ಮತ್ತು ಪೊಲೀಸರು ತಿಂಗಳ ತನಿಖೆಗಳು ಮತ್ತು ಹುಡುಕಾಟಗಳ ನಂತರ ಸಂಗ್ರಹಿಸಿದ ಎಲೆಕ್ಟ್ರಾನಿಕ್ ಪುರಾವೆಗಳಿವೆ. ಪ್ರಸ್ತುತ ಇದನ್ನು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆ.

ನ್ಯಾಯಾಲಯವು ಅಫ್ತಾಬ್‌ನ ನ್ಯಾಯಾಂಗ ಬಂಧನವನ್ನು ಫೆಬ್ರವರಿ 7ರವರೆಗೆ ಎರಡು ವಾರಗಳ ವರೆಗೆ ವಿಸ್ತರಿಸಿದೆ. ಫೆಬ್ರವರಿ 7 ರಂದು ನ್ಯಾಯಾಲಯದ ಮುಂದೆ ದೈಹಿಕವಾಗಿ ಹಾಜರುಪಡಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದೆ. ಚಾರ್ಜ್ ಶೀಟ್‌ನಲ್ಲಿ ಎಷ್ಟು ಪುಟಗಳಿವೆ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಕೇಳಿದಾಗ, ಚಾರ್ಜ್‌ಶೀಟ್‌ 6,629 ಪುಟಗಳನ್ನು ಹೊಂದಿದೆ ಎಂದು ತನಿಖಾಧಿಕಾರಿ ಹೇಳಿದರು.
ಇದೇವೇಳೆ ನ್ಯಾಯಾಲಯ ಅಫ್ತಾಬ್‌ ಪೂನಾವಾಲಾ ಅವರ ನ್ಯಾಯಾಂಗ ಬಂಧನವನ್ನು ಫೆಬ್ರವರಿ 7ರ ವರೆಗೆ 14 ದಿನಗಳ ಕಾಲ ವಿಸ್ತರಿಸಿದೆ.
ಮಂಗಳವಾರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪೂನಾವಾಲಾನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ತನ್ನ ಪ್ರಸ್ತುತ ವಕೀಲ ಎಂ.ಎಸ್. ಖಾನ್ ಅವರನ್ನು ಬದಲಾಯಿಸಲು ಬಯಸುವುದಾಗಿ ಅಫ್ತಾಬ್‌ ಪೂನಾವಾಲಾ ನ್ಯಾಯಾಲಯಕ್ಕೆ ತಿಳಿಸಿದ. ಚಾರ್ಜ್ ಶೀಟ್ ಅನ್ನು ಫೆಬ್ರವರಿ 7 ರಂದು ತೆಗೆದುಕೊಳ್ಳಲಾಗುವುದು ಎಂದು ಮ್ಯಾಜಿಸ್ಟ್ರೇಟ್ ಹೇಳಿದರು.
ಚಾರ್ಜ್ ಶೀಟ್‌ನ ಪ್ರತಿಯನ್ನು ಆರೋಪಿಗಳಿಗೆ ಸಂಜ್ಞೆ ತೆಗೆದುಕೊಂಡ ನಂತರವಷ್ಟೇ ಲಭ್ಯವಾಗಲಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.
ಜನವರಿ 4 ರಂದು, ದಕ್ಷಿಣ ದೆಹಲಿಯ ಮೆಹ್ರೌಲಿ ಅರಣ್ಯ ಪ್ರದೇಶದಿಂದ ಪತ್ತೆಯಾದ ಕೂದಲು ಮತ್ತು ಮೂಳೆಗಳ ಮಾದರಿಗಳು ಶ್ರದ್ಧಾ ಅವರ ಮಾದರಿಗಳೊಂದಿಗೆ ಹೊಂದಿಕೆಯಾಗುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮೊದಲು ಡಿಸೆಂಬರ್ 9 ರಂದು ಸಾಕೇತ್ ನ್ಯಾಯಾಲಯವು ಅಫ್ತಾಬ್‌ನ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಿತು.

ಪ್ರಮುಖ ಸುದ್ದಿ :-   ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement