ಲಕ್ನೋ: ಮಂಗಳವಾರ ಲಕ್ನೋದ ವಜೀರ್ ಹಸನ್ಗಂಜ್ ರಸ್ತೆಯಲ್ಲಿ ವಸತಿ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರು ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಕಟ್ಟಡವು ಹಠಾತ್ತನೆ ಕುಸಿದಿದೆ. ಮೂರು ಮೃತದೇಹಗಳನ್ನು ಪತ್ತೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಎನ್ಡಿಆರ್ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ತಿಳಿದುಕೊಂಡಿದ್ದು, ಸ್ಥಳಕ್ಕೆ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳನ್ನು ಕಳುಹಿಸಲು ಸೂಚನೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಆದಿತ್ಯನಾಥ್ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದರು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ