ಕಾರವಾರ: ಜೊಯಿಡಾ ತಾಲೂಕಿನ ಉಳವಿ ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವ ಜನವರಿ 28 ರಿಂದ ಆರಂಭವಾಗಲಿದ್ದು, ಫೆಬ್ರುವರಿ 8ರ ವರೆಗೆ ನಡೆಯಲಿದೆ. ಫೆಬ್ರುವರಿ 6 ರಂದು ಮಹಾರಥೋತ್ಸವ ನಡೆಯಲಿದೆ ಎಂದು ಉಳವಿ ಚೆನ್ನಬಸವೇಶ್ವರ ಟ್ರಸ್ಟ್ ಉಪಾಧ್ಯಕ್ಷ ಸಂಜಯ ಕಿತ್ತೂರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಥೋತ್ಸವದ ದಿನಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಜನವರಿ 28 ರಂದು ಬೆಳಗ್ಗೆ 7 ಗಂಟೆಗೆ ಘಟಸ್ಥಲ ಧ್ವಜಾರೋಹಣ, ರಾತ್ರಿ 8 ಗಂಟೆಗೆ ರಥಗಳ ಪೂಜೆ, 29 ರಂದು ಪಲ್ಲಕ್ಕಿ ಉತ್ಸವ, 30ರಂದು ಸಂಜೆ ಭೂಮಿಪೂಜೆ, ನವಧಾನ್ಯ ಹಾಕುವುದು, 31 ರಂದು ಉತ್ಸವಮೂರ್ತಿ ಪ್ರತಿಷ್ಠಾಪನೆ, ಫೆಬ್ರುವರಿ 1 ರಂದು ಪಲ್ಲಕ್ಕಿ ಉತ್ಸವ, ರಕ್ಷಾದೇವಿಯ ಸಣ್ಣರಥೋತ್ಸವ, 2 ರಂದು ವೀರಭದ್ರೇಶ್ವರ ಸಣ್ಣ ರಥೋತ್ಸವ, 3 ರಂದು ಎಲ್ಲಾ ದೇವರ ಸಣ್ಣ ರಥೋತ್ಸವ, 4 ರಂದು ಚತುರ್ದಶಿ, 5 ರಂದು ರಾತ್ರಿ 8 ಗಂಟೆಗೆ ಚೆನ್ನಬಸವೇಶ್ವರರ ರಥಾರೋಹಣ, 6 ರಂದು ಸಂಜೆ 4 ಗಂಟೆಗೆ ಮಹಾರಥೋತ್ಸವ, 7 ರಂದು ಬಯಲು ಕುಸ್ತಿ. 8 ರಂದು ಓಕಳಿ ಹಾಗೂ ಸಣ್ಣರಥೋತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಚಕ್ಕಡಿ ಗಾಡಿ ತರದಂತೆ ಮನವಿ
ಪ್ರತಿವರ್ಷ ಉಳವಿ ಚೆನ್ನಬಸವೇಶ್ವರರ ಜಾತ್ರೆಗೆ ಭಕ್ತರು, ಅದರಲ್ಲೂ ರೈತರು ಚಕ್ಕಡಿ ಗಾಡಿಗಳಲ್ಲಿಯೇ ಆಗಮಿಸುತ್ತಿದ್ದರು. ಆದರೆ ಈಗ ಜಾನುವಾರುಗಳಿಗೆ ಚರ್ಮಗಂಟು ರೋಗ ಬಂದಿರುವುದರಿಂದ, ಜಾನುವಾರುಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಬಾರಿ ಚಕ್ಕಡಿಗಳಿಗೆ ನಿರ್ಬಂಧ ವಿಧಿಸಿದೆ. ಹೀಗಾಗಿ ದೇವಸ್ಥಾನ ಸಮಿತಿ ವತಿಯಿಂದಲೂ ಚಕ್ಕಡಿ ಗಾಡಿ ತರದಂತೆ ಎಲ್ಲಾ ಕಡೆ ಪ್ರಚಾರ ಮಾಡಲಾಗಿದೆ ಎಂದು ಅವರು ಹೇಳಿದರು.
ಈಗಾಗಲೇ ಕರಪತ್ರ ವಿತರಣೆ, ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲಾಡಳಿತದಿಂದ ಕೂಡಾ ಪ್ರಕಟಣೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ