ಮತದಾರರಿಗೆ ಹಣದ ಆಮಿಷ ಆರೋಪ : ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು.

ಬೆಂಗಳೂರು: ಮತದಾರರ ಮೇಲೆ ಆಮಿಷ ಒಡ್ಡಿದ ಆರೋಪದ ಸಂಬಂಧ ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನಲ್ಲಿ ಇಂದು, ಬುಧವಾರ (ಜನವರಿ 25) ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲು ಹಾಗೂ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಯ ನಡೆ ಗಮನಿಸುತ್ತೀದಿರಿ. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡಲು ಹೊರಟಿದ್ದಾರೆ. 40% ಕಮಿಷನ್​ ಮೂಲಕ ಸಾವಿರಾರು ಕೋಟಿ ಸಂಗ್ರಹ ಮಾಡಿದ್ದಾರೆ. ಒಂದು ಮತಕ್ಕೆ 6 ಸಾವಿರ ಕೊಡುತ್ತೇವೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ ಆಮಿಷ ಒಟ್ಟಿದ ವೀಡಿಯೋ ಕೂಡ ಇದೆ. ಈ ಸಂಬಂಧ ದಾಖಲೆ ಸಮೇತ ಪೊಲೀಸರಿಗೆ ದೂರು ನೀಡಿದ್ದೇವೆ. ಐಪಿಸಿ ಸೆಕ್ಷನ್ 171(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಪೊಲೀಸರು ಎಫ್​ಐಆರ್​ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸುತ್ತೇವೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾತನಾಡಿ, ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಬಿಜೆಪಿಗೆ ಮನವರಿಕೆ ಆಗಿದೆ. ಹೀಗಾಗಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಯವರು ಒಂದು ಸಂಚು ರೂಪಿಸಿದ್ದಾರೆ. ಇದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಳಿನಕುಮಾರ ಕಟೀಲು, ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದ್ದಾರೆ. ಚುನಾವಣೆಯಲ್ಲಿ 30 ಸಾವಿರ ಕೋಟಿ ಖರ್ಚು ಮಾಡಲು ಈಗಾಗಲೇ ಬಿಜೆಪಿ ತೀರ್ಮಾನ ಮಾಡಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಈ ಮಾತು ಹೇಳಿದ್ದಾರೆ. ಅವರು ಇದನ್ನು ನಡ್ಡಾ, ಕಟೀಲು, ಹಾಗೂ ಬೊಮ್ಮಾಯಿ ಅವರಿಗೆ ಮಾಹಿತಿ ಇಲ್ಲದೇ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement