ರಾಜ್ಯದ ಐದು ನಗರಗಳಲ್ಲಿ ಜಿಯೋ 5ಜಿ ಸೇವೆ ಆರಂಭ

ಬೆಂಗಳೂರು: ರಿಲಯನ್ಸ್ ಜಿಯೋ ಮಂಗಳವಾರ (ಜನವರಿ 24) 50 ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳ ಅತಿದೊಡ್ಡ ಬಿಡುಗಡೆಯನ್ನು ಘೋಷಿಸಿದೆ. ಇದರೊಂದಿಗೆ ದೇಶದ 184 ನಗರಗಳಲ್ಲಿ ಜಿಯೋ ಬಳಕೆದಾರರು ಈಗ ಜಿಯೋ ಟ್ರೂ 5ಜಿ ಸೇವೆಗಳನ್ನು ಪಡೆಯುತ್ತಿದ್ದಾರೆ.
ಮಂಗಳವಾರದಿಂದ ಪ್ರಾರಂಭ ಆದ ಸೇವೆಯೊಂದಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಪಡೆಯಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನು ಜಿಯೋ ವೆಲ್ ಕಂ ಆಫರ್ ಮೂಲಕ ಆಹ್ವಾನಿಸಿದೆ.
ಈ ವೇಳೆ ಪ್ರತಿಕ್ರಿಯಿಸಿದ ಜಿಯೋ ವಕ್ತಾರರು, “ಕರ್ನಾಟಕದ ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ತುಮಕೂರು ಹಾಗೂ 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 45 ಹೆಚ್ಚುವರಿ ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸುತ್ತಿರುವುದನ್ನು ಘೋಷಿಸಲು ನಾವು ರೋಮಾಂಚನಗೊಂಡಿದ್ದೇವೆ, ಇದರೊಂದಿಗೆ ಒಟ್ಟು ಸಂಖ್ಯೆಯನ್ನು ಭಾರತದ 184 ನಗರಗಳಲ್ಲಿ ಪ್ರಾರಂಭಿಸಿದ್ದೇವೆ. ಇದು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಎಲ್ಲೆಡೆ 5ಜಿ ಸೇವೆಗಳ ಅತಿದೊಡ್ಡ ಜಾರಿಗಳಲ್ಲಿ ‌‌ಒಂದಾಗಿದೆ ಎಂದು ಹೇಳಿದ್ದಾರೆ.
ನಾವು ರಾಷ್ಟ್ರದಾದ್ಯಂತ ಟ್ರೂ 5ಜಿ ಜಾರಿಯ ‌‌ವೇಗ ಮತ್ತು ತೀವ್ರತೆಯನ್ನು ಹೆಚ್ಚಿಸಿದ್ದೇವೆ. 2023ರ ಡಿಸೆಂಬರ್ ಒಳಗೆ ಇಡೀ ದೇಶವು ಜಿಯೋ ಟ್ರೂದಿಂದ 5ಜಿ ಸೇವೆಗಳು ಆನಂದಿಸಲು ಮತ್ತು ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ.
ಪ್ರತಿಯೊಂದು ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ಗೋವಾ, ಹರಿಯಾಣ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪುದುಚೇರಿ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳ ನಿರಂತರ ಬೆಂಬಲಕ್ಕಾಗಿ ನಾವು ಆಭಾರಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement