ತ್ರಿಪುರಾ ಚುನಾವಣೆ: 43 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಿಪಿಐ(ಎಂ), ಆದ್ರೆ ಮಾಜಿ ಸಿಎಂ ಮಾಣಿಕ್ ಸರ್ಕಾರ್ ಹೆಸರು ಪಟ್ಟಿಯಿಂದ ನಾಪತ್ತೆ

ಅಗರ್ತಲಾ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ತ್ರಿಪುರಾ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಮಾಣಿಕ್ ಸರ್ಕಾರ್ ಅವರ ಹೆಸರು ಪಟ್ಟಿಯಿಂದ ನಾಪತ್ತೆಯಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಎಡರಂಗವು ಸಾಂಪ್ರದಾಯಿಕ ಎದುರಾಳಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ.
ನಾಲ್ಕು ಬಾರಿ ತ್ರಿಪುರದ ಮುಖ್ಯಮಂತ್ರಿಯಾಗಿದ್ದ ಮಾಣಿಕ್ ಸರ್ಕಾರ್ ಜೊತೆಗೆ ಸಿಪಿಐ(ಎಂ) ಮಾಜಿ ಸಚಿವ ಮತ್ತು ಆರು ಬಾರಿ ಶಾಸಕರಾಗಿದ್ದ ಬಾದಲ್ ಚೌಧರಿ ಅವರನ್ನು ಅನಾರೋಗ್ಯದ ಕಾರಣ ಪಟ್ಟಿಯಿಂದ ಕೈಬಿಟ್ಟಿದೆ ಎಂದು ವರದಿಯಾಗಿದೆ. ಸರ್ಕಾರ್ ಅವರು ತ್ರಿಪುರಾದಲ್ಲಿ ಚುನಾವಣಾ ಪ್ರಚಾರವನ್ನು ಮುನ್ನಡೆಸಲಿದ್ದಾರೆ.
ಈ ಪಟ್ಟಿಯಲ್ಲಿ ಎಡರಂಗದ ತನ್ನ ಮೈತ್ರಿ ಪಾಲುದಾರರಾದ ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್‌ನ ಅಭ್ಯರ್ಥಿಗಳ ಹೆಸರುಗಳು ಸೇರಿವೆ. ಸ್ವತಂತ್ರ ಅಭ್ಯರ್ಥಿ ಪುರುಷುತ್ತಮ್ ರಾಯ್ ಬರ್ಮನ್ ಕೂಡ ಮೈತ್ರಿಯಲ್ಲಿದ್ದಾರೆ.
ಪಟ್ಟಿಯ ಪ್ರಕಾರ ಸಿಪಿಐ(ಎಂ) 43 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಕೇವಲ 13 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು. ಸಿಪಿಐ, ಆರ್‌ಎಸ್‌ಪಿ, ಎಫ್‌ಬಿ ಮತ್ತು ಸ್ವತಂತ್ರ ಪಕ್ಷಕ್ಕೆ ತಲಾ ಒಂದು ಸ್ಥಾನ ನೀಡಲಾಗಿದೆ. ಎಡರಂಗವು 24 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಸಿಪಿಐ(ಎಂ) ಈ ಬಾರಿ ಎಂಟು ಹಾಲಿ ಶಾಸಕರನ್ನು ಕೈಬಿಟ್ಟಿದೆ.
ಸಾಂಪ್ರದಾಯಿಕ ಎದುರಾಳಿಗಳೆಂದು ಪರಿಗಣಿಸಲ್ಪಟ್ಟಿರುವ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಈ ತಿಂಗಳ ಆರಂಭದಲ್ಲಿ ಅಚ್ಚರಿಯ ನಡೆಯಲ್ಲಿ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದವು. ಆದರೆ, ಮಂಗಳವಾರ ನಿಗದಿಯಾಗಿದ್ದ ಪತ್ರಿಕಾಗೋಷ್ಠಿಯನ್ನು ಪಕ್ಷಗಳು ರದ್ದುಗೊಳಿಸಿದ್ದರಿಂದ ಸೀಟು ಹಂಚಿಕೆ ಕುರಿತು ಒಪ್ಪಂದಕ್ಕೆ ಬರಲು ಸ್ವಲ್ಪ ವಿಳಂಬವಾದಂತಿದೆ.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

13 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ, ಆದರೆ ಗುರುವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ. 2013ರಲ್ಲಿ ಕಾಂಗ್ರೆಸ್ 10 ಸ್ಥಾನ ಗೆದ್ದಿದ್ದರೆ, 2018ರಲ್ಲಿ ಒಂದೇ ಒಂದು ಸ್ಥಾನ ಗೆಲ್ಲುವಲ್ಲಿ ವಿಫಲವಾಗಿತ್ತು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಜೊತೆಗೆ 36 ಸ್ಥಾನಗಳನ್ನು ಗೆದ್ದು ಎಡರಂಗ ಸರ್ಕಾರವನ್ನು ಸೋಲಿಸಿತು. ಸಿಪಿಐ(ಎಂ) ಕೇವಲ 16 ಸ್ಥಾನಗಳನ್ನು ಗಳಿಸಲು ಸಾಧ್ಯವಾಯಿತು.
ಇದಕ್ಕೂ ಮುನ್ನ ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್ ಮೈತ್ರಿಕೂಟ ಸೇರಲು ನಿರಾಕರಿಸಿತ್ತು. “ಮುಂಬರುವ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ)-ಕಾಂಗ್ರೆಸ್ ಸಂಯೋಜನೆಯೊಂದಿಗೆ ಟಿಎಂಸಿ ಯಾವುದೇ ಚುನಾವಣಾ ಮೈತ್ರಿ ರೂಪಿಸಲು ಹೋಗುವುದಿಲ್ಲ ಏಕೆಂದರೆ ಕಮ್ಯುನಿಸ್ಟ್ ಆಡಳಿತದಲ್ಲಿ ಅನೇಕ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ತಮ್ಮದೇ ಪಕ್ಷಕ್ಕೆ ಮತ ಹಾಕುವುದಿಲ್ಲ” ಎಂದು ತ್ರಿಪುರಾ ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ಪಿಜುಶ್ ಕಾಂತಿ ಬಿಸ್ವಾಸ್ ಹೇಳಿದರು.ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಫೆಬ್ರವರಿ 6 ರಂದು ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು.
60 ಸ್ಥಾನಗಳ ತ್ರಿಪುರಾ ವಿಧಾನಸಭೆಗೆ ಫೆಬ್ರವರಿ 16 ರಂದು ಚುನಾವಣೆ ನಡೆಯಲಿದ್ದು, ಜನವರಿ 30 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement