ಮಂಡ್ಯ : ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾವಣೆಯಾದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಬಿಜೆಪಿಯಲ್ಲಿ ಅವರ ನೇಮಕಕ್ಕೆ ಅಸಮಾಧಾನ ಸ್ಪೋಟಗೊಂಡಿದೆ. ಮಂಡ್ಯದ ವಿವಿ ರಸ್ತೆ, ಸುಭಾಷ್ ರಸ್ತೆ ಗೋಡೆ ಮೇಲೆ ‘ಗೋ ಬ್ಯಾಕ್ ಆರ್.ಅಶೋಕ್’ ಮಂಡ್ಯ ಬಿಟ್ಟು ಹೋಗಿ ಅಶೋಶ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಗೋಪಾಲಯ್ಯ ಅವರನ್ನು ದಿಢೀರ್ ಬದಲಾವಣೆ ಮಾಡಿ ಸಚಿವ ಅಶೋಶ ಅವರಿಗೆ ಈ ಹೊಣೆಗಾರಿಕೆ ನೀಡಲಾಗಿತ್ತು. ಅಶೋಕ ಅವರಿಗೆ ಉಸ್ತುವಾರಿ ನೀಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ವಿವಿ ರಸ್ತೆ, ಸುಭಾಷ್ ರಸ್ತೆ ಗೋಡೆ ಮೇಲೆ ‘ಗೋ ಬ್ಯಾಕ್ ಆರ್.ಅಶೋಕ್’ ಮಂಡ್ಯ ಬಿಟ್ಟು ಹೋಗಿ ಅಶೋಶ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಿಸಿದ್ದಕ್ಕೆ ಆರ್.ಅಶೋಕ್ ವಿರುದ್ಧ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.
ಕಳೆದ ಕೆಆರ್ ಪೇಟೆ ಉಪಚುನಾವಣೆಯಲ್ಲಿ ನಾರಾಯಣಗೌಡ ಗೆಲುವಿನ ಮೂಲಕ ಬಿಜೆಪಿ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಉತ್ತಮ ಸಾಧನೆ ಮಾಡಲು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ. ಕಾರ್ಯತಂತ್ರದ ಬಾಗವಾಗಿಯೇ ಆರ್.ಅಶೋಕ್ ಅವರಿಗೆ ಮಂಡ್ಯ ಉಸ್ತುವಾರಿಯನ್ನು ನೀಡಲಾಗಿದೆ. ಆದರೆ ಅವರಿಗೆ ಉಸ್ತುವಾರಿ ಜವಾಬ್ದಾರಿ ನೀಡಿರುವುದಕ್ಕೆ ಈಗ ವಿರೋಧ ವ್ಯಕ್ತವಾಗಿದೆ. ಅಶೋಕ್ ಅವರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಫೇಸ್‍ಬುಕ್ ಹಾಗೂ ರಸ್ತೆಯ ಗೋಡೆಯ ಮೇಲೆ ಅಶೋಕ್ ಗೋ ಬ್ಯಾಕ್, ಬಾಯ್ಕಟ್ ಎಂಬ ಪೋಸ್ಟರ್ ಗಳನ್ನು ಅಂಟಿಸಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ