ಮೋದಿ ಪ್ರಧಾನಿ ಆಗಿದ್ದಕ್ಕೆ ನನಗೆ ಪ್ರಶಸ್ತಿ ಬಂದಿದೆ: ಸಾಹಿತಿ ಎಸ್.ಎಲ್. ಭೈರಪ್ಪ

posted in: ರಾಜ್ಯ | 0

ಮೈಸೂರು: ಮೋದಿ ಪ್ರಧಾನಿ ಆದ ಕಾರಣದಿಂದಲೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂದಿದೆ. ಅವರು ಪ್ರಧಾನಿ ಆಗಿರದಿದ್ದರೆ ನನಗೆ ಪ್ರಶಸ್ತಿ ಬರುತ್ತಿರಲಿಲ್ಲ ಎಂದು ಖ್ಯಾತ ಸಾಹಿತಿ ಎಸ್‌.ಎಲ್‌.ಭೈರಪ್ಪ ಹೇಳಿದ್ದಾರೆ.
ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟವಾದ ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ ಅವರು ಮಾಡಿದ ಸನ್ಮಾನ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಪದ್ಮ ಭೂಷಣ ಪ್ರಶಸ್ತಿಗೆ ನನ್ನನ್ನ ಪರಿಗಣಿಸುರುವುದಕ್ಕೆ ಸಂತಸ ತಂದಿದೆ. ಇದನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಅವರು ಪ್ರಧಾನಿ ಆಗಿದ್ದಕ್ಕೆ ಇದು ನನಗೆ ಸಿಕ್ಕಿದೆ. ಇಲ್ಲದಿದ್ದರೆ ಸಿಗುತ್ತಿರಲಿಲ್ಲ. ನರೇಂದ್ರ ಮೋದಿ ಈ ದೇಶ ಎಂದೂ ಕಂಡಿರದಂತಹ ಪ್ರಧಾನಿ. ಎಷ್ಟೋ ವರ್ಷಗಳ ಬಳಿಕ ಒಬ್ಬ ಉತ್ತಮ ಪ್ರಧಾನಿ ನಮ್ಮ ದೇಶಕ್ಕೆ ಸಿಕ್ಕಿದ್ದಾರೆ. ನನಗೆ ಈ ಪ್ರಶಸ್ತಿ ಸಿಕ್ಕಿದೆ ಎಂದು ನಾನು ಈ ಮಾತನ್ನು ಹೇಳುತ್ತಿಲ್ಲ. 2024 ರಿಂದ 2029 ರವರೆಗೂ ಮೋದಿ ಪ್ರಧಾನಿ ಆಗಬೇಕು. 2029 ರ ನಂತರ ಅವರು ನಿವೃತ್ತಿ ಹೊಂದಲಿ ಎಂದು ಎಸ್.ಎಲ್ ಭೈರಪ್ಪ ಸಲಹೆ ನೀಡಿದರು.
ನನ್ನ ಕಾದಂಬರಿಗಳ ಮೂಲವೇ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ಮೊದಲಿನಿಂದಲೂ ಇತ್ತು. ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ಆದರೆ ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದು ಭೈರಪ್ಪ ಹೇಳಿದರು.
ಲೇಖಕ ಸತ್ತೇ ಸಾಯುತ್ತಾನೆ, ಆದರೆ ಆತನ ಪುಸ್ತಕ ಎಷ್ಟು ದಿನ ಪುಸ್ತಕ ಇರುತ್ತದೆಯೋ ಅಲ್ಲಿವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದು ಹೇಳಿದರು.
ಹೈ ಸ್ಕೂಲ್ ಓದಲು ಮೈಸೂರಿಗೆ ಬಂದೆ. ಮೈಸೂರು ಭಾವನಾತ್ಮಕವಾಗಿ ನನಗೆ ಸಾಕಷ್ಟು ತೃಪ್ತಿ ಕೊಟ್ಟ ಊರು ನನ್ನ ಎಷ್ಟೋ ಬರವಣಿಗೆಗಳಿಗೆ ಮೈಸೂರು ಸ್ಪೂರ್ತಿಯಾಗಿದೆ . ಮೈಸೂರು ಜನ ತುಂಬಾ ಪ್ರೀತಿ ಕೊಟ್ಟಿದ್ದಾರೆ. ಸದಾ ಮೈಸೂರು ಜನರಿಗೆ ಋಣಿ ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.8 / 5. ಒಟ್ಟು ವೋಟುಗಳು 4

ನಿಮ್ಮ ಕಾಮೆಂಟ್ ಬರೆಯಿರಿ

advertisement