ವಿಶ್ವದ ಮೊದಲ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್‌ ಬಿಡುಗಡೆ

ನವದೆಹಲಿ : ಭಾರತದಲ್ಲೇ ತಯಾರಾದ ವಿಶ್ವದ ಮೊದಲ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್‌ ಅನ್ನು ಭಾರತ್ ಬಯೋಟೆಕ್ ಸಂಸ್ಥೆ ಗುರುವಾರ ಬಿಡುಗಡೆಗೊಳಿಸಿದೆ.
ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಲಸಿಕೆಯನ್ನು ಬಿಡುಗಡೆ ಮಾಡಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತೀ ಡೋಸ್‌ಗೆ 325 ರೂ.ಗಳಿಗೆ ಲಸಿಕೆ ಲಭ್ಯವಿದೆ. ಆದರೆ ಆಸ್ಪತ್ರೆಗಳಲ್ಲಿ ಇದರ ಬೆಲೆ 800 ರೂ.ಗಳಾಗಿದೆ. ವಾಷಿಂಗ್ಟನ್ ಯೂನಿವರ್ಸಿಟಿ, ಸೇಂಟ್ ಲೂಯಿಸ್ ಸಹಭಾಗಿತ್ವದಲ್ಲಿ ಲಸಿಕೆ ಅಭಿವೃದ್ದಿಪಡಿಸಲಾಗಿದೆ.
28 ದಿನಗಳ ಅಂತರದಲ್ಲಿ ಎರಡು ಡೋಸ್‌ ಲಸಿಕೆಯನ್ನು ಪಡೆದುಕೊಳ್ಳಬೇಕು. ಆದರೆ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಂಡವರು ಈ ಲಸಿಕೆ ಪಡೆದುಕೊಳ್ಳುವಂತಿಲ್ಲ. ಕೋವಿನ್‌ ವೆಬ್‌ಸೈಟ್‌ನಲ್ಲಿಯೂ ಲಸಿಕೆ ಪಡೆದುಕೊಳ್ಳಲು ಅನುಮತಿ ಕಾಯ್ದಿರಿಸಿಕೊಳ್ಳಲು ಅವಕಾಶವಿದೆ ಎಂದು ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕಂಪನಿಯು ಡಿಸೆಂಬರ್ 2022 ರಲ್ಲಿ, ಪ್ರಾಥಮಿಕ 2 ಡೋಸ್‌ಗೆ ಮತ್ತು ಭಿನ್ನಜಾತಿಯ ಬೂಸ್ಟರ್ ಡೋಸ್‌ಗೆ ಅನುಮೋದನೆ ಪಡೆದುಕೊಂಡಿದೆ. ಅದಕ್ಕೂ ಮೊದಲು, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) 18 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ತುರ್ತು ಸಂದರ್ಭಗಳಲ್ಲಿ ಇಂಟ್ರಾನಾಸಲ್ ಲಸಿಕೆಯ ನಿರ್ಬಂಧಿತ ಬಳಕೆಯನ್ನು ಅನುಮೋದಿಸಿತ್ತು. ಲಸಿಕೆಯ ಎರಡು ಡೋಸ್‌ಗಳನ್ನು 28 ದಿನಗಳ ಅಂತರದಲ್ಲಿ ನೀಡಬೇಕು.
ಮುನ್ನೆಚ್ಚರಿಕೆ ಅಥವಾ ಬೂಸ್ಟರ್ ಡೋಸ್ ತೆಗೆದುಕೊಂಡವರಿಗೆ ಮೂಗಿನ ಲಸಿಕೆಯನ್ನು ನೀಡಲಾಗುವುದಿಲ್ಲ ಎಂದು ದೇಶದ ಲಸಿಕೆ ಕಾರ್ಯಪಡೆಯ ಮುಖ್ಯಸ್ಥರು ಕಳೆದ ತಿಂಗಳು ಹೇಳಿದ್ದರು.

ಇಂದಿನ ಪ್ರಮುಖ ಸುದ್ದಿ :-   ಪ್ಯಾನ್ -ಆಧಾರ್ ಲಿಂಕ್ ಮಾಡುವ ಗಡುವು ವಿಸ್ತರಣೆ ಮಾಡಿದ ಸರ್ಕಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement