ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಎಚ್. ವಿಶ್ವನಾಥ…!

ಮೈಸೂರು: ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಸುಳಿವು ನೀಡಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇಂದು, ಶುಕ್ರವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಮೈಸೂರಿನ ಖಾಸಗಿ ಹೊಟೇಲ್‌ನಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿರುವ ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್ ಮಾತುಕತೆ ನಡೆಸುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ಸರ್ಕಾರದ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿತ್ತು. ಹಾಗೆಯೇ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ ಎಂದು ವಿಶ್ವನಾಥ ಸಹ ಹೇಳಿಕೆ ನೀಡಿದ್ದರು. ಅಲ್ಲದೆ ಇತ್ತೀಚೆಗೆ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನೂ ಭೇಟಿಯಾಗಿದ್ದರು. ಈಗ ರಾಜ್ಯದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.
ಎಚ್. ವಿಶ್ವನಾಥ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಇದೆ. ಇತ್ತೀಚಿಗೆ ಅನೇಕ ಬಾರಿ ಅವರು ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಂಡಿದ್ದರು ಹಾಗೂ ಭೇಟಿಯಾಗಿದ್ದರು.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

 

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement