ಎರಡು ಐಎಎಫ್ ಯುದ್ಧ ವಿಮಾನ ಪತನ: ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ

posted in: ರಾಜ್ಯ | 0

ಬೆಳಗಾವಿ : ತರಬೇತಿ ಕಾರ್ಯಾಚರಣೆಯಲ್ಲಿದ್ದ ಭಾರತೀಯ ವಾಯುಪಡೆ(ಐಎಎಫ್)ಯ ಎರಡು ಯುದ್ಧ ವಿಮಾನಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಪತನಗೊಂಡಿದ್ದು, ದುರಂತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ರೇವಣ್ಣಸಿದ್ದಪ್ಪ ಸಾರಥಿ (34) ಹುತಾತ್ಮರಾಗಿದ್ದಾರೆ.
ಯುದ್ಧ ವಿಮಾನ ಪತನಗೊಂಡ ನಂತರ ಹನುಮಂತ ರಾವ್ ಸಾರಥಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಇಬ್ಬರು ಪೈಲಟ್‌ಗಳು (ಸುಖೋಯ್ Su-30 ವಿಮಾನ) ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಗ್ವಾಲಿಯರ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಐಎಎಫ್ ಈ ಕುರಿತು ಟ್ವೀಟ್‌ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದೆ. ಮಿರಾಜ್-2000 ಮತ್ತು ಸುಖೋಯ್ ಸು-30 ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾಗಿ ಪತನಗೊಂಡಿವೆ. ಮೃತ ಪೈಲಟ್‌ ಹನುಮಂತ ರಾವ್‌ ಸಾರಥಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರದವರು. ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಪೋಷಕರನ್ನು ಅಗಲಿದ್ದಾರೆ. ವಿಂಗ್ ಕಮಾಂಡರ್ ಸಾರಥಿ ಅವರ ತಂದೆ ರೇವಣ್ಣ ಸಿದ್ದಪ್ಪ ಅವರು ಸೇನೆಯಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿದ್ದರು.
ಅವರ ಸಹೋದರ ಪ್ರವೀಣ್ ಐಎಎಫ್‌ನಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿದ್ದಾರೆ. ಜನವರಿ 29, ಭಾನುವಾರದಂದು ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಪಾರ್ಥಿವ ಶರೀರ ಆಗಮಿಸುವ ನಿರೀಕ್ಷೆಯಿದೆ.

ಇಂದಿನ ಪ್ರಮುಖ ಸುದ್ದಿ :-   ‌ ಬಳ್ಳಾರಿ ಮೇಯರ್ ಆಗಿ ತ್ರಿವೇಣಿ ಆಯ್ಕೆ : ಇವರು ರಾಜ್ಯದ ಅತ್ಯಂತ ಕಿರಿಯ ಮೇಯರ್

ಎರಡೂ ಯುದ್ಧ ವಿಮಾನಗಳು ಡಿಕ್ಕಿ ಹೊಡೆದುಕೊಂಡಿದ್ದು, ಈ ಬಗ್ಗೆ ತನಿಖೆ ಮಾಡಲಾಗುವುದು ಎಂದು ಭಾರತೀಯ ವಾಯುಪಡೆ ತಿಳಿಸಿದೆ.
ಹನುಮಂತ ರಾವ್ ಸಾರಥಿ ಅವರ ಸಾವಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಸಂತಾಪ ಸೂಚಿಸಿದ್ದು, “ಗ್ವಾಲಿಯರ್ ಬಳಿ ಅಪಘಾತದಲ್ಲಿ ಹುತಾತ್ಮರಾದ ಹನುಮಂತ್ ರಾವ್ ಸಾರಥಿ ಅವರನ್ನು ಕಳೆದುಕೊಂಡಿದ್ದಕ್ಕೆ ತೀವ್ರ ದುಃಖವಾಗಿದೆ. ಅವರ ಅಗಲಿದ ಕುಟುಂಬಕ್ಕೆ ನನ್ನ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ನಾವು ಅವರ ಕುಟುಂಬದ ಪರವಾಗಿ ನಿಲ್ಲುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement