ಎಲ್​ಐಸಿಯಿಂದ 9394 ಹುದ್ದೆಗಳಿಗೆ ಅರ್ಜಿ ಆಹ್ವಾನ

posted in: ರಾಜ್ಯ | 0

ಭಾರತೀಯ ಜೀವ ವಿಮಾ ನಿಗಮ (LIC) ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 9394 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು:
ಎಲ್‌ಐಸಿ (LIC) ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್- 9394 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು. ಅಥವಾ ಮುಂಬೈನ ಇನ್ಶುರೆನ್ಸ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಫೆಲೋಶಿಪ್ ಹೊಂದಿರಬೇಕು.
ವಯೋಮಿತಿ: ವಯಸ್ಸು 1ನೇ ಜನವರಿ 2023 ಕ್ಕೆ 21 ವರ್ಷಗಳಿಗಿಂತ ಕಡಿಮೆ ಇರಬಾರದು. ಗರಿಷ್ಠ 30 ವರ್ಷ. ಅಂದರೆ ಅಭ್ಯರ್ಥಿಗಳು 2ನೇ ಜನವರಿ 1993 ಕ್ಕಿಂತ ಮೊದಲು ಮತ್ತು 1ನೇ ಜನವರಿ 2002 ಕ್ಕಿಂತ ನಂತರ ಜನಿಸಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್​ಸಿ-ಎಸ್​ಟಿ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ. ಶುಲ್ಕ ಹಾಗೂ ಎಸ್​ಸಿ-ಎಸ್​ಟಿ ಅಭ್ಯರ್ಥಿಗಳಿಗೆ 100 ರೂ. ಶುಲ್ಕ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಈ https://licindia.in/ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ https://licindia.in/Bottom-Links/Careers/Recruitment-of-Apprentice-Development-Officer-22-2 ಕ್ಲಿಕ್ ಮಾಡಿ.
ಗಮನಿಸಬೇಕಾದ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 10-02-2023
ಪೂರ್ವಭಾವಿ ಪರೀಕ್ಷೆಯ ದಿನಾಂಕ- 12-03-2023
ಮುಖ್ಯ ಪರೀಕ್ಷೆಯ ದಿನಾಂಕ- 8-0೪-2023

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ : ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement