ಧನ್‌ಬಾದ್‌ನ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ವೈದ್ಯ ದಂಪತಿ ಸೇರಿ 6 ಮಂದಿ ಸಾವು

ಧನಬಾದ್‌ : ಶುಕ್ರವಾರ ರಾತ್ರಿ ಜಾರ್ಖಂಡ್‌ನ ಧನ್‌ಬಾದ್‌ನ ಪುರಾನಾ ಬಜಾರ್‌ನಲ್ಲಿರುವ ಹಜ್ರಾ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಆರು ಜನರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಹಾಗೂ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ.
ಮೃತರನ್ನು ಡಾ.ವಿಕಾಸ್ ಹಜ್ರಾ ಮತ್ತು ಅವರ ಪತ್ನಿ ಡಾ. ಪ್ರೇಮಾ ಹಜ್ರಾ ಮತ್ತು ಆಸ್ಪತ್ರೆಯ ಇತರ ಉದ್ಯೋಗಿಗಳು ಎಂದು ಗುರುತಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ರಮೇಣ, ಇದು 1ನೇ ಮಹಡಿ ಆವರಿಸಿತು ಮತ್ತು ಅಲ್ಲಿ ಮಲಗಿದ್ದ ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಬೆಂಕಿ ಅವಕಾಶ ನೀಡಲಿಲ್ಲ.
ಬೆಂಕಿಯನ್ನು ನಂದಿಸಲು ಯಾವುದೇ ವ್ಯವಸ್ಥೆಗಳಿಲ್ಲದ ಕಾರಣ ಕೊಠಡಿ ಹೊಗೆಯಿಂದ ತುಂಬಿತ್ತು, ಇದರಿಂದಾಗಿ ವೈದ್ಯ ದಂಪತಿ ಸೇರಿದಂತೆ ಆರು ಜನರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಆಸ್ಪತ್ರೆಯ ಎರಡೂ ಕಡೆಯಿಂದ ಒಟ್ಟು 9 ಜನರನ್ನು ರಕ್ಷಿಸಿವೆ. ಇವರೆಲ್ಲರನ್ನು ಸಮೀಪದ ಪಾಟಲಿಪುತ್ರ ನರ್ಸಿಂಗ್ ಹೋಂಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹೇಳುವಂತೆ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ತಡೆಯಲು ವಿಶೇಷ ಭದ್ರತಾ ವ್ಯವಸ್ಥೆ ಇರಲಿಲ್ಲ. ಎಂಟಿಫೈರ್ ಯಂತ್ರ ಕೂಡ ಸಕ್ರಿಯವಾಗಿರಲಿಲ್ಲ ಎಂದು ವರದಿಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement