ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ ಮೂವರು ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಹಳ್ಳದ ಬಳಿಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದ ವರದಿಯಾಗಿದೆ.
ರಾಯಬಾಗ- ಹಾರೂಗೇರಿ ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಎರಡೂ ಬೈಕ್‌ಗಳಲ್ಲಿ ಅತಿ ವೇಗವಾಗಿ ಬರುತ್ತಿತ್ತು ಹಾಗೂ ಬೈಕ್‌ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ ಎಂದು ಹೇಳಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಸವಾರರು ಸುಮಾರು 10 ರಿಂದ 12 ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ.
ಡಿಕ್ಕಿಯಾಗಿರುವ ಎರಡು ಬೈಕ್‌ಗಳ ಮೇಲೆ ಒಟ್ಟು ನಾಲ್ಕು ಜನ ಪ್ರಯಾಣ ಮಾಡುತ್ತಿದ್ದರು. ಒಬ್ಬ ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತಾಲೂಕು ಆಸ್ಪತ್ರೆಗಳಿಗೆ ಮೃತ ದೇಹಗಳನ್ನು ರವಾನಿಸಿದ್ದಾರೆ.

3 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement