ಬೆಳಗಾವಿ: ವಾಯುಪಡೆಯ ಯುದ್ಧ ವಿಮಾನಗಳ ಪತನ ವೇಳೆ ಹುತಾತ್ಮರಾದ ಪೈಲಟ್ ವಿಂಗ್ ಕಮಾಂಡರ್ ಬೆಳಗಾವಿಯ ಗಣೇಶಪುರದ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಮೃತ ಯೋಧನ ಪಾರ್ಥೀವ ಶರೀರವನ್ನು ಸೇನೆಯ ವಿಶೇಷ ವಿಮಾನದ ಮೂಲಕ ಭಾನುವಾರ ಮಧ್ಯಾಹ್ನ 12:30 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ತರಲಾಯಿತು. ಸೇನೆಯಿಂದ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.
ನಂತರ ಪಾರ್ಥಿವ ಶರೀರವನ್ನು ಬೆಳಗಾವಿ ಗಣೇಶಪುರದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಯಿತು. ಅಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಮೊದಲಾದವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ಪಾರ್ಥಿವ ಶರೀರಕ್ಕೆ ಧಾರ್ಮಿಕ ವಿಧಿ ವಿಧಾನಗಳು ಮುಗಿದ ನಂತರ ಅದನ್ನು ಗಣೇಶಪುರದಿಂದ ಬೆನಕನಹಳ್ಳಿ ಸ್ಮಶಾನಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ವಾಯುಸೇನಾ ಅಧಿಕಾರಿಗಳು ಕುಟುಂಬಕ್ಕೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರು ನಿಧನರಾದ ವಿಷಯ ತಿಳಿದು ತುಂಬ ದುಃಖವಾಯಿತು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಂತಾಪ ವ್ಯಕ್ತಪಡಿಸಿದರು.
ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ ಮತ್ತು ಮಿಗ್ ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾಗಿ ದುರಂತ ಸಂಭವಿಸಿತ್ತು. ಇದರಲ್ಲಿ ವಿಮಾನ ಹಾರಟ ನಡೆಸುತ್ತಿದ್ದ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಹನುಮಂತರಾವ್ ಗ್ವಾಲಿಯರ್‌ನಲ್ಲೇ ನೆಲೆಸಿದ್ದರು. ನಿತ್ಯದ ತರಬೇತಿ ಹಾರಾಟಕ್ಕೆ ಎರಡು ವಿಮಾನಗಳು ಹೋದಾಗ ಈ ಅವಘಡ ಸಂಭವಿಸಿತ್ತು.
ಸೇನೆಯ ಕುಟುಂಬ: ಮೃತ ಹನುಮಂತರಾವ್ ಅವರ ಕುಟುಂಬವು ಸೇನೆಯ ಕುಟುಂಬವಾಗಿದೆ. ಈ ಕುಟುಂಬದವರು ಮೂಲತಃ ಹಾವೇರಿ ಜಿಲ್ಲೆಯ ಮಕನೂರು ಗ್ರಾಮದವರು. ಹನುಮಂತರಾವ್ ಅವರ ತಂದೆ ರೇವಣಸಿದ್ದಪ್ಪ ಅವರು ಬೆಳಗಾವಿಯಲ್ಲಿ ಭಾರತೀಯ ಸೇನೆಯಿಂದ ಗೌರವ ಕ್ಯಾಪ್ಟನ್ ಆಗಿ ನಿವೃತ್ತರಾಗಿದ್ದಾರೆ. ಹನುಮಂತರಾವ್ ಅವರ ಹಿರಿಯ ಸಹೋದರ ಪ್ರವೀಣ ಸಾರಥಿ ಕೂಡ ಏರ್‌ಫೋರ್ಸ್‌ನಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿದ್ದಾರೆ. ಅವರು ಪಠಾಣಕೋಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರವೀಣ ಅವರ ಪತ್ನಿ ಕೂಡ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ