ಕನ್ನಡದ ಹಿರಿಯ ನಟ ಮನದೀಪ್ ರಾಯ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ​ದೀಪ್ ರಾಯ್(Mandeep Roy) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಕಾವಲ್​ಭೈರಸಂಧ್ರದ ನಿವಾಸದಲ್ಲಿ ರಾತ್ರಿ 1:45ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ಕಳೆದ ಡಿಸೆಂಬರ್​ನಲ್ಲಿ ಇವರಿಗೆ ಹೃದಯಾಘಾತವಾಗಿ ಬೆಂಗಳೂರಿನ ಶೇಷಾದ್ರಿಪುರದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು. ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾದರೂ ಆಗಾಗ್ಗೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು, ಭಾನುವಾರ 2 ಗಂಟೆ ಸುಮಾರಿಗೆ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮನದೀಪ್‌ ರಾಯ್‌ ಅವರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 1949ರಲ್ಲಿ ಜನಿಸಿದ ಮನದೀಪ್‌ ರಾಯ್‌ ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ಹಾಗೂ ಪೋಷಕ ನಟರಾಗಿ ರಂಜಿಸಿದ್ದಾರೆ. ಇಂಜಿನಿಯರಿಂಗ್ ಪದವಿ ಪಡೆದಿದ್ದ ಮನ್‌ದೀಪ್ ರಾಯ್ ಐಬಿಎಂ ಮತ್ತು ಟಿಸಿಎಸ್ ಕಂಪನಿಗಳಲ್ಲಿ ಕೆಲಸ ಮಾಡಿದ್ದರು. ಆಗ ಶಂಕರ್‌ನಾಗ್‌ರ ಮಿಂಚಿನ ಓಟ ಸಿನಿಮಾದಲ್ಲಿ ನಟಿಸಿದ್ದರು.

ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಕನ್ನಡ ಚಿತ್ರರಂಗ ಪ್ರವೇಶಿಸಿದವರು. ಮನ್‌ದೀಪ್‌ ರಾಯ್ ಮೂಲತಃ ಮುಂಬೈನವರು. 9ನೇ ವಯಸ್ಸಿನಲ್ಲಿಯೇ ರಂಗಭೂಮಿ ಕಡೆ ಒಲವು ಬೆಳೆಸಿಕೊಂಡರು. ಅಲ್ಲಿ ಪರಿಚಯವಾದ ಶಂಕರನಾಗ್‌ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.ಡಾ. ರಾಜ್​ಕುಮಾರ್​ ಅನಂತ ನಾಗ್​, ಶಂಕರ​ ನಾಗ್ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ. ಮನ್​ದೀಪ್ ರಾಯ್​ ವಿಶೇಷವಾಗಿ ತಮ್ಮ ಹಾಸ್ಯ ಪಾತ್ರಗಳ ಮೂಲಕ ಕನ್ನಡ ಸಿನಿ ಪ್ರೇಮಿಗಳನ್ನ ಸೆಳೆದಿದ್ದರು.
ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್​, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್​ ತಪ್ಪಾ, ಆಂಟಿ ಪ್ರೀತ್ಸೆ, ಏಳು ಸುತ್ತಿನ ಕೋಟೆ, ಸಂಕಷ್ಟಕರ ಗಣಪತಿ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ, ಓ ಪ್ರೇಮವೆ, ಬೆಂಕಿಯ ಬಲೆ, ಆಪ್ತರಕ್ಷಕ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಮನ್​ದೀಪ್ ರಾಯ್ ಅಭಿನಯಿಸಿದ್ದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement