ಮೂವರು ಮಕ್ಕಳನ್ನು ನೀರಿನ ಸಂಪ್‌ ಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಸಮೀಪ ವಿಠ್ಠಲವಾಡಿ ತಾಂಡಾದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂವರು ಮಕ್ಕಳನ್ನು ನೀರಿನ ಸಂಪ್‌ಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಇಂದು, ಭಾನುವಾರ ಬೆಳಗ್ಗೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ (ತಾಯಿ)ಯನ್ನು ಗೀತಾ ರಾಮು ಚೌವ್ಹಾಣ (32), ಹಾಗೂ ಮಕ್ಕಳನ್ನು ಸೃಷ್ಟಿ (6) ಸಮರ್ಥ (4) ಮತ್ತು ಕಿಶನ್ (3) ಎಂದು ಗರುತಿಸಲಾಗಿದೆ. ಮೂರು ಮಕ್ಕಳೊಂದಿಗೆ ನೀರಿನ ಸಂಪ್ ನಲ್ಲಿ ಹಾರಿ‌ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ನಿನ್ನೆ, ಶನಿವಾರ ರಾತ್ರಿ ಪತಿಯೊಂದಿಗೆ ಜಗಳವಾಡಿದ್ದ ಗೀತಾ, ನಂತರ ಪತಿ ರಾಮು ಮಲಗಿದ್ದ ವೇಳೆ ಮೂವರು‌ ಮಕ್ಕಳನ್ನು ನೀರಿನ‌ ಸಂಪ್ ಗೆ ಎಸೆದಿದ್ದಾಳೆ ಹಾಗೂ ನಂತರ ಬಳಿಕ ತಾನೂ ಸಂಪ್‌ಗೆ ಹಾರಿದ್ದಾಳೆ ಎನ್ನಲಾಗಿದೆ.
ಬೆಳಿಗ್ಗೆ ಮನೆಯಲ್ಲಿ ಪತ್ನಿ ಹಾಗೂ ಮಕ್ಕಳು ಇಲ್ಲದಿರುವುದನ್ನು ಕಂಡು ಪತಿ ಮನೆಯಲ್ಲಿ ಹುಡುಕಾಡಿದ್ದಾನೆ. ರಾತ್ರಿ ವೇಳೆ ಮನೆಯಿಂದ ಹೊರಬಂದು ಹುಡುಕಿದರೂ ಸಿಕ್ಕಿಲ್ಲ. ನಂತರ ಮನೆ ಬಾಗಿಲ ಬಳಿಯಿರುವ ನೀರಿನ ಸಂಪ್‌ನ ಬಾಗಿಲು ತೆರೆದುಕೊಂಡಿದ್ದು, ಅದರೊಳಗೆ ಬೆಳಕು ಬಿಟ್ಟು ನೋಡಿದಾಗ ಮಕ್ಕಳು ಮತ್ತು ಪತ್ನಿ ಮೃತದೇಹಗಳು ಪತ್ತೆಯಾಗಿವೆ ಎಂದು ಪತಿ ರಾಮು ತಿಳಿಸಿದ್ದಾರೆ. ಈ ದುರ್ಘಟನೆ ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ತಿಕೋಟಾ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement