ಬಸ್ ನಿಲ್ಲಿಸಿ ಕೆರೆಗೆ ಹಾರಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಿದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ..!

ತುಮಕೂರು : ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಲು ಕೆಎಸ್‌ಆರ್‌ಟಿಸಿ ಬಸ್‌ ಚಾಲಕನೊಬ್ಬ ಬಸ್‌ ನಿಲ್ಲಿಸಿ ಕೆರೆಗೆ ಹಾರಿ ಅವರನ್ನು ರಕ್ಷಿಸಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಭಾನುವಾರ ನಡೆದಿದೆ.
ಶಿರಾ ತಾಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಕೆರೆಯಲ್ಲಿ ಕಾಲುಜಾರಿ ಬಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಇಬ್ಬರು ಬಾಲಕಿಯರನ್ನು ನೋಡಿದ ಕೆ.ಎಸ್‌.ಆರ್‌.ಟಿ.ಸಿ. ಚಾಲಕ ಬಸ್ಸನ್ನು ನಿಲ್ಲಿಸಿ ನೀರಿಗಿಳಿದು ಅವರನ್ನು ಕಾಪಾಡಿದ್ದಾನೆ. ಸುಷ್ಮಾ (18) ಹಾಗೂ ಮಂಜುಳ (9) ಎಂಬವರು ಬದುಕಿ ಬಂದ ಹೆಣ್ಣು ಮಕ್ಕಳು.
ಘಟನೆ ವಿವರ..
ತಾಯಿ ಜೊತೆ ಬಟ್ಟೆ ತೊಳೆಯಲು ಈ ಇಬ್ಬರು ಹೆಣ್ಣು ಮಕ್ಕಳು ಹಂದಿಕುಂಟೆ ಅಗ್ರಹಾರ ಕೆರೆ ಬಳಿ ಹೋಗಿದ್ದಾರೆ. ಈ ವೇಳೆ ಸುಷ್ಮಾ ಮತ್ತು ಮಂಜುಳ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಇದರಿಂದ ಗಾಬರಿಗೊಂಡ ತಾಯಿ ಕೂಡಲೇ ಮಕ್ಕಳನ್ನು ಕಾಪಾಡುವಂತೆ ರಸ್ತೆಗೆ ಹೋಗಿ ಜೋರಾಗಿ ಕೂಗಿಕೊಂಡಿದ್ದಾರೆ. ಇದೇವೇಳೆ ಕೆ.ಎಸ್‌.ಆರ್‌.ಟಿ.ಸಿ ಬಸ್‌ ಚಾಲಕ ಮಂಜುನಾಥ ಶಿರಾದಿಂದ ನಾಗಪ್ಪನಹಳ್ಳಿ ಗೇಟ್‌ ಮಾರ್ಗವಾಗಿ ಬಸ್‌ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಮಹಿಳೆಯೊಬ್ಬರು ಕೂಗುತ್ತಿರುವುದನ್ನು ಕೇಳಿದ ಅವರು ಬಸ್‌ ನಿಲ್ಲಿಸಿ ಏನಾಯಿತೆಂದು ಕೇಳಿದರು. ಅಗ್ರಹಾರ ಕೆರೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗುತ್ತಿರುವುದನ್ನು ಮಹಿಳೆ ತಿಳಿಸಿದರು. ತಡ ಮಾಡದೆ  ಬಸ್ಸನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ ಓಡಿ ಹೋಗಿ  ನೀರಿಗೆ ಜಿಗಿದು ಹೆಣ್ಣುಮಕ್ಕಳನ್ನು ರಕ್ಷಿಸಿದ್ದಾರೆ. ಒಬ್ಬೊಬ್ಬರನ್ನಾಗಿ ರಕ್ಷಿಸಿ ದಂಡೆಗೆ ಕರೆ ತಂದಿದ್ದಾರೆ  ಹಾಗೂ ಹೊಟ್ಟೆಯೊಳಗೆ ತುಂಬಿದ್ದ ನೀರನ್ನು ಹೊರ ಹಾಕಿದ್ದಾರೆ. ನಂತರ ಹೆಣ್ಣುಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಮಂಜುನಾಥ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement