ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ : ಸಮಿತಿ ರಚನೆ

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲಕುಮಾರ ಟ್ವೀಟ್ ಮಾಡಿದ್ದು, ‘ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ. ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ’ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಜನರು ಮಾತನಾಡುತ್ತಾರೆ. ತುಳು ಭಾಷೆಯನ್ನು ದೇಶದ ಸಂವಿಧಾನದ 8 ನೇ ಪರಿಚ್ಛೇದಲ್ಲಿ ಸೇರಿಸಬೇಕು ಎಂದು ಹಲವು ವರ್ಷಗಳಿಂದ ಒತ್ತಾಯವಿದೆ. ಅನೇಕ ಸಂಘ-ಸಂಸ್ಥೆಗಳು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement