ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು:15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ (Teachers Recruitment) 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್, ಈಗ ಆ ಪಟ್ಟಿ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ, ಇಂದು ಸೋಮವಾರ (ಜನವರಿ 30) ಹೈಕೋರ್ಟ್ ಏಕಸದಸ್ಯ ಪೀಠ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಪತಿಯ ಜಾತಿ ಆದಾಯ ಪ್ರಮಾಣ ಪತ್ರ ಪರಿಗಣನೆ ಪ್ರಶ್ನಿಸಿ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ನೇಮಕಾತಿಗೆ ತಂದೆ ಜಾತಿ ಆದಾಯ ಪ್ರಮಾಣ ಪತ್ರ ಪರಿಗಣಿಸಬೇಕು. ಆದರೆ ಪತಿ ಆದಾಯ ಪ್ರಮಾಣ ಪತ್ರ ಪರಿಗಣನೆ ಶಿಕ್ಷಣ ಇಲಾಖೆಯ ನಿಯಮ ಕಾನೂನು ಬಾಹಿರ ಎಂದು ಅರ್ಜಿದಾರರ ಪರ ವಕೀಲರಾದ ಶಶಿಕಿರಣ ಶೆಟ್ಟಿ ವಾದ ಮಂಡಿಸಿದ್ದರು.
ಶಿಕ್ಷಣ ಇಲಾಖೆಯ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿದ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅಭ್ಯರ್ಥಿಗಳ ತಂದೆಯ ಜಾತಿ ಆದಾಯ ಪ್ರಮಾಣ ಪತ್ರ ಆಧರಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿತು.

ಪ್ರಮುಖ ಸುದ್ದಿ :-   ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಪ್ರಲ್ಹಾದ ಜೋಶಿಗೆ ಕೇಂದ್ರ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ

ಕಳೆದ ನವೆಂಬರ್ 18ರಂದು ಶಿಕ್ಷಣ ಇಲಾಖೆ ತಾತ್ಕಾಲಿಕ ಆಯ್ಜೆ ಪಟ್ಟಿ ಪ್ರಕಟಿಸಿತ್ತು. ಇದರಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯು ವಿವಾಹಿತ ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಆಧಾರವಾಗಿ ನೀಡುವಂತೆ ಸೂಚಿಸಲಾಗಿತ್ತು. ಇದನ್ನು ಪ್ರಶ್ನಿಸಿ ನೂರಾರು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿಗಳ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನ್ವಯವಾಗಬೇಕೇ ವಿನಹ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನ್ವಯವಾಗುವುದಿಲ್ಲ. ತಂದೆಯ ಜಾತಿಯನ್ನು ಮಕ್ಕಳು ಮುಂದುವರಿಸುವುದರಿಂದ ಅದನ್ನೇ ಆಧಾರವಾಗಿ ಪರಿಗಣಿಸಬೇಕೆಂದು ಮಹಿಳಾ ಅಭ್ಯರ್ಥಿಗಳ ಪರ ಹಿರಿಯ ವಕೀಲ ಶಶಿಕಿರಣ ಶೆಟ್ಟಿ ವಾದ ಮಂಡಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ರವರಿದ್ದ ಏಕಸದಸ್ಯ ಪೀಠ, ಒಬಿಸಿ ಮಹಿಳಾ ವಿವಾಹಿತ ಅಭ್ಯರ್ಥಿಗಳ ಆಯ್ಕೆಯಲ್ಲಿ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪರಿಗಣಿಸುವಂತೆ ಆದೇಶ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement