ಧನಬಾದ್:ಜಾರ್ಖಂಡ್‌ನ ಧನಬಾದ್ ಜಿಲ್ಲೆಯ ಬಹುಮಹಡಿ ಕಟ್ಟಡದಲ್ಲಿ ಮಂಗಳವಾರ ಸಂಭವಿಸಿದ ದೊಡ್ಡ ಬೆಂಕಿಯ ಅನಾಹುತದಲ್ಲಿ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜಧಾನಿ ರಾಂಚಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಧನ್‌ಬಾದ್‌ನ ಜೋರಾಫಟಕ್ ಪ್ರದೇಶದ ಆಶೀರ್ವಾದ ಟವರ್‌ನಲ್ಲಿ ಸಂಜೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಅವಘಡದಲ್ಲಿ ಹಲವರು ಸುಟ್ಟು ಕರಕಲಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಧನ್ಬಾದ್ ಡೆಪ್ಯುಟಿ ಕಮಿಷನರ್ ಸಂದೀಪ ಸಿಂಗ್ ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳದಲ್ಲಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಸಿಂಗ್, ಮೃತಪಟ್ಟ ಮತ್ತು ಗಾಯಗೊಂಡವರ ನಿಖರವಾದ ಸಂಖ್ಯೆಯನ್ನು ಇನ್ನೂ ಕಂಡುಹಿಡಿಯಬೇಕಾಗಿದೆ ಎಂದು ಹೇಳಿದರು.
“ಧನ್‌ಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಬೆಂಕಿಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ. ಹಲವಾರು ಜನರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಅಪಾರ್ಟ್ಮೆಂಟ್‌ನಲ್ಲಿದ್ದರು. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ನಾವು ರಕ್ಷಣೆಗೆ ಗಮನಹರಿಸಿದ್ದೇವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಎಸ್‌ಪಿ ಧನಬಾದ್ ಸಂಜೀವಕುಮಾರ ಹೇಳಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಧನ್‌ಬಾದ್‌ನ ಆಶೀರ್ವಾದ್ ಟವರ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಜನರು ಮೃತಪಟ್ಟ ಬಗ್ಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ ಸೊರೇನ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತವು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಟ್ವೀಟ್ ಮಾಡಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
ಕಟ್ಟಡದಲ್ಲಿ 50ಕ್ಕೂ ಹೆಚ್ಚು ಮಂದಿ ಸಿಲುಕಿರುವುದರಿಂದ ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಧನ್‌ಬಾದ್‌ನ ಶಕ್ತಿ ದೇವಸ್ಥಾನದ ಬಳಿ ಇರುವ ಆಶೀರ್ವಾದ ಟವರ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬೆಂಕಿ ವೇಗವಾಗಿ ವ್ಯಾಪಿಸಿದ್ದರಿಂದ ಅನಾಹುತ ಜಾಸ್ತಿಯಾಗಿದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ