ಸಹೋದರನಿಗೆ ಸವಾಲು : ಸೋಮಶೇಖರ ರೆಡ್ಡಿ ವಿರುದ್ಧ ಪತ್ನಿಯನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ…!

ಕೊಪ್ಪಳ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್‌ಪಿಪಿ)ದ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಯಾಗಿ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಿಜೆಪಿ ಶಾಸಕ ಹಾಗೂ ತಮ್ಮ ಸಹೋದರ ಜಿ. ಸೋಮಶೇಖರ್ ರೆಡ್ಡಿ ವಿರುದ್ಧ ತಮ್ಮ ಪತ್ನಿ ಸ್ಪರ್ಧಿಸುವುದನ್ನು ಖಚಿತಪಡಿಸಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ಮಂಗಳವಾರ ಕಲ್ಯಾಣ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಬಳ್ಳಾರಿ ಕ್ಷೇತ್ರದಿಂದ ಪತ್ನಿ ಅರುಣಾ ಲಕ್ಷ್ಮಿ ಅವರನ್ನೇ ಕಣಕ್ಕಿಳಿಸಲಾಗುವುದು ಎಂದು ಹೇಳಿದ್ದಾರೆ.
ಹನುಮನ ಜನ್ಮ ಸ್ಥಳ ಅಂಜನಾದ್ರಿಯ ಸಮಗ್ರ ಅಭಿವೃದ್ದಿಗಾಗಿ 5 ಸಾವಿರ ಕೋಟಿ ರೂ.ಗಳ ಸಮಗ್ರ ಯೋಜನೆಯನ್ನು ಸಿದ್ದಪಡಿಸಿದ್ದೇನೆ. ಇಡೀ ವಿಶ್ವವೇ ನಮ್ಮೆಡೆಗೆ ತಿರುಗಿ ನೋಡಬೇಕು. ಅಂತಹ ಬದಲಾವಣೆ ತರಲಾಗುವುದು. ಗಂಗಾವತಿಯಲ್ಲಿ 200 ಬೆಡ್​ಗಳ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣದ ಗುರಿ ಇದೆ. ಇಲ್ಲಿ ಸ್ಲಂ ರಹಿತ ಪ್ರದೇಶ ನಿರ್ಮಾಣ ಮಾಡುವ ಉದ್ದೇಶ ನನಗಿದೆ ಎಂದು ಹೇಳಿದರು.
ಆಸ್ತಿ ಮುಟ್ಟುಗೋಲು ಹಾಕುವುದಾಗಿ ನನಗೆ ಬೆದರಿಕೆಗಳು ಬರುತ್ತಿವೆ. ಆದರೆ ಖಂಡಿತಾ ನಾನು ಹೆದರುವುದಿಲ್ಲ. ಕಳೆದ ಹನ್ನೆರಡು ವರ್ಷ ವನವಾಸ ಅನುಭವಿಸಿದ್ದೇನೆ. ನನ್ನ ವಿರುದ್ಧ ಬರುವ ಅವಮಾನಗಳನ್ನು ಸವಾಲಾಗಿ ಸ್ವೀಕರಿಸುತ್ತೇನೆ. ನಾನು ನೀಡಿದ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement