ನವದೆಹಲಿ : ಕೇಂದ್ರ ಬಜೆಟ್-2023 ರಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ, ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮ ರೂಪಿಸಲು ಕೇಂದ್ರ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ಬಜೆಟ್ ಮಂಡನೆ ಮಾಡಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮ ಅಳವಡುಸಲಾಗುತ್ತದೆ. ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಐಸಿಎಂಆರ್ ಲ್ಯಾನ್‌ಗಳ ಸ್ಥಾಪನೆ ಮಾಡಲಾಗುತ್ತದೆ. ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ಗ್ರಂಥಾಲಯಗಳಲ್ಲಿ ರೋಗಗಳ ಬಗ್ಗೆ ಪ್ರಾದೇಶಿಕ ಭಾಷೆಯಲ್ಲಿ ಸಾಂಕ್ರಾಮಿಕ ರೋಗಗಳ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ, ಐಐಟಿಗಳಿಗೆ 5 ವರ್ಷಗಳ ಕಾಲ ಅಧ್ಯಯನಕ್ಕೆ ಅನುದಾನ ನೀಡಲಾಗುವುದು. 5ಜಿ ಅಪ್ಲಿಕೇಶನ್ ಅಭಿವೃದ್ಧಿಗೆ ನೂರು ಲ್ಯಾಬ್ ಸ್ಥಾಪನೆ ಮಾಡಲಾಗುವುದು ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ