ಕೇಂದ್ರ ಬಜೆಟ್‌ 2023 : ರೈಲ್ವೆಗೆ ಬಜೆಟ್‌ನಲ್ಲಿ ಸಾರ್ವಕಾಲಿಕ ದಾಖಲೆ ಹಣ ಮೀಸಲು, ಒಂದು ಜಿಲ್ಲೆ, ಒಂದು ಉತ್ಪನ್ನ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ ದೊಡ್ಡ ಮಟ್ಟದ ಹಣವನ್ನು ಮೀಸಲಿಟ್ಟಿದೆ. ಈ ಬಾರಿಯ ಬಜೆಟ್‌ನಲ್ಲಿ ಒಟ್ಟಾರೆ 2.40 ಲಕ್ಷ ಕೋಟಿ ರೂಪಾಯಿ ಹಣವನ್ನು ರೈಲ್ವೆ ಅಭಿವೃದ್ಧಿಗಾಗಿ ಮೀಸಲಿಡಲಾಗುವುದು ಎಂದು ವಿತ್ತ ಸಚಿನೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
2013 ಹಾಗೂ 14ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಿದ ಹಣಕ್ಕಿಂತ 9 ಪಟ್ಟು ಹೆಚ್ಚು ಹಣವನ್ನು ರೈಲ್ವೇಸ್‌ಗಾಗಿ ಮೀಸಲಿಟ್ಟಿದ್ದೇವೆ ಎಂದು ಅವರು ಘೋಷಣೆ ಮಾಡಿದರು. ರೈಲ್ವೆಗೆ 2009-2014ರ ವರೆಗೆ ವರ್ಷಕ್ಕೆ ಸರಾಸರಿ 10,623 ಕೋಟಿ ರೂಪಾಯಿ ಹಣ ಮೀಸಲಿಟ್ಟಿದ್ದರೆ, 2014 ರಿಂದ 2019ರವರೆಗೆ ಸರಾಸರಿ 25 ಸಾವಿರ ಕೋಟಿ ರೂಪಾಯಿಯನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿತ್ತು. 2022-23ರಲ್ಲಿ 77,271 ಕೋಟಿ ರೂಪಾಯಿಯನ್ನು ಸರ್ಕಾರ ಮೀಸಲಿಟ್ಟಿದ್ದರೆ, 2023-24ರಲ್ಲಿ ದಾಖಲೆಯ 2.40 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದೆ.

50 ಪ್ರವಾಸಿ ತಾಣಗಳ ಅಭಿವೃದ್ಧಿ
ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸೋದ್ಯಮಕ್ಕಾಗಿ ಪ್ಯಾಕೇಜ್ ರೂಪದಲ್ಲಿ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ದೇಶೀಯ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸೋದ್ಯಮದಕ್ಕೆ ಹೆಚ್ಚಿನ ಉತ್ತೇಜನ ನೀಡಲಿದ್ದು, ವಿಶೇಷವಾಗಿ ಯುವಕರಿಗೆ ಉದ್ಯೋಗ ಮತ್ತು ಉದ್ಯಮಶೀಲತೆಗೆ ಈ ಕ್ಷೇತ್ರವು ದೊಡ್ಡ ಅವಕಾಶವನ್ನು ಒದಗಿಸಲಿದೆ. ಸರ್ಕಾರಿ ಕಾರ್ಯಕ್ರಮ ಮತ್ತು ಸಾರ್ವಜನಿಕ-ಖಾಸಗಿಗಳ ಒಮ್ಮುಖದೊಂದಿಗೆ ಪ್ರವಾಸೋದ್ಯಮದ ಪ್ರಚಾರವನ್ನು ಮಿಷನ್ ಮೋಡ್‌ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಸುಮಾರು 50 ಪ್ರವಾಸಿತಾಣಗಳನ್ನು ಅಭಿವೃದ್ಧಿಗೊಳಿಸಲು ಮಿಷನ್ ಮೋಡ್‌ನಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಭೌತಿಕ ಸಂಪರ್ಕ, ವರ್ಚುವಲ್ ಸಂಪರ್ಕ, ಪ್ರವಾಸಿ ಮಾರ್ಗದರ್ಶಿಗಳು, ಬೀದಿ ಬದಿಗಳಲ್ಲಿ ಉನ್ನತ ಗುಣಮಟ್ಟ ಆಹಾರ ಮತ್ತು ಪ್ರವಾಸಿ ಭದ್ರತೆಯಂತಹ ಅಂಶಗಳ ಬಗ್ಗೆ ಗಮನ ಹರಿಸಲಾಗುತ್ತದೆ. ಜೊತೆಗೆ ಟ್ರಿಪ್ ಅನುಭವವನ್ನು ಹೆಚ್ಚಿಸಲು ಎಲ್ಲಾ ಸಂಬಂಧಿತ ಅಂಶಗಳನ್ನು ಅಪ್ಲಿಕೇಶನ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗುವುದು. ಪ್ರತಿ ತಾಣವನ್ನು ಅಭಿವೃದ್ಧಿಪಡಿಸಲಾಗುವುದು. ಇದೊಂದು ಕಂಪ್ಲೀಟ್ ಪ್ಯಾಕೇಜ್ ಆಗಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

ಡಿಜಿಟಲ್ ಲೈಬ್ರರಿ ಸ್ಥಾಪನೆ
ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆ ಬಜೆಟ್‌ನ ಪ್ರಮುಖ ಘೋಷಣೆಗಳಲ್ಲಿ ಒಂದಾಗಿದೆ. ಗ್ರಾಮ ಪಂಚಾಯತ್ ಮತ್ತು ವಾರ್ಡ್​​ ಮಟ್ಟದಲ್ಲಿ ನ್ಯಾಷನಲ್ ಡಿಜಿಟಲ್​ ಲೈಬ್ರರಿಗಳ ಸ್ಥಾಪನೆ ಮಾಡುವುದಾಗಿ ಬಜೆಟ್​​ನಲ್ಲಿ ಘೋಷಿಸಿದ್ದಾರೆ. ಓದುವ ಸಂಸ್ಕೃತಿಯನ್ನು ಉತ್ತೇಜಿಸಲು ರಾಷ್ಟ್ರೀಯ ಪುಸ್ತಕ ಟ್ರಸ್ಟ್​​​ನ್ನು ನಿರ್ಮಿಸಲಾಗುತ್ತಿದೆ, ಮಕ್ಕಳ ಪುಸ್ತಕ ಟ್ರಸ್ಟ್​​ನ್ನು ​​ಪ್ರಾದೇಶಿಕ ಭಾಷೆಗಳು ಮತ್ತು ಇಂಗ್ಲಿಷ್‌ನಲ್ಲಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಒಂದು ಜಿಲ್ಲೆ, ಒಂದು ಉತ್ಪನ್ನ; ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ
ಪ್ರತಿ ರಾಜ್ಯಗಳೂ ಕೂಡ ತಮ್ಮ ರಾಜ್ಯದಲ್ಲಿ ಯುನಿಟಿ ಮಾಲ್‌ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಬೆಂಬಲ ನೀಡಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದರು. ಈ ಯುನಿಟಿ ಮಾಲ್‌ ರಾಜ್ಯದ ರಾಜಧಾನಿ ಅಥವಾ ಆಯಾ ರಾಜ್ಯದ ಅತ್ಯಂತ ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ನಿರ್ಮಾಣ ಮಾಡಬೇಕು ಎಂದು ಸೂಚಿಸಲಾಗುತ್ತದೆ. ಈ ಯುನಿಟಿ ಮಾಲ್‌ನಲ್ಲಿ ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಮತ್ತು ಜಿಐ ಉತ್ಪನ್ನಗಳು ಮತ್ತು ಇತರ ಕರಕುಶಲ ವಸ್ತುಗಳ ಪ್ರಚಾರ ಮತ್ತು ಮಾರಾಟ ಮಾಡಲಾಗುತ್ತದೆ ಎಂದು ಬಜೆಟ್‌ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.
ಯುನಿಟಿ ಮಾಲ್‌ನಲ್ಲಿ ಪ್ರಚಾರ ಮಾಡಬಹುದಾದ ಉತ್ಪನ್ನಗಳೆಂದರೆ, ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಮಾಡಲಾದ ಉತ್ಪನ್ನಗಳು, ಸ್ಥಳೀಯ ಕರಕುಶಲ ವಸ್ತುಗಳು ಮತ್ತು ಪ್ರದೇಶದ ಸಾಂಸ್ಕೃತಿಕ ವಿಶೇಷ ಉತ್ಪನ್ನಗಳು. ಉದಾಹರಣೆಗೆ ಕರ್ನಾಟಕದ ಯೂನಿಟಿ ಮಾಲ್‌ನಲ್ಲಿ ಪ್ರದರ್ಶಿಸಬಹುದಾದ ಕರ್ನಾಟಕದ ಕೆಲವು ಜಿಐ ಟ್ಯಾಗ್ ಉತ್ಪನ್ನಗಳೆಂದರೆ ಬ್ಯಾಡಗಿ ಮೆಣಸು, ಕಿನ್ನಾಳ ಆಟಿಕೆಗಳು, ಮೈಸೂರು ಅಗರಬತ್ತಿ, ಇತ್ಯಾದಿ.
“ದೇಶವು ದೇಶೀಯ ಮತ್ತು ವಿದೇಶಿ ಪ್ರವಾಸಿಗರಿಗೆ ಅಪಾರ ಆಕರ್ಷಣೆಯನ್ನು ನೀಡುತ್ತದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿದೆ. ಈ ವಲಯವು ವಿಶೇಷವಾಗಿ ಯುವಕರಿಗೆ ಉದ್ಯೋಗ ಮತ್ತು ಉದ್ಯಮಶೀಲತೆಗೆ ದೊಡ್ಡ ಅವಕಾಶಗಳನ್ನು ಹೊಂದಿದೆ ಎಂದು ಸಚಿವೆ ಬಜೆಟ್‌ ಭಾಷಣದ ವೇಳೆ ಹೇಳಿದ್ದಾರೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನದಲ್ಲಿ ರಾಜ್ಯಗಳ ಕರಕುಶಲ ಮತ್ತು ಜಿಐ ಉತ್ಪನ್ನಗಳ ಪ್ರಚಾರ ಮಾಡಲು ರಾಜ್ಯ ರಾಜಧಾನಿಗಳು ಯುನಿಟಿ ಮಾಲ್‌ಗಳನ್ನು ತೆರೆಯುವಂತೆ ಪ್ರೋತ್ಸಾಹಿಸಲಾಗುತ್ತದೆ.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement