ಕರ್ನಾಟಕ ಭೂಮಾಪನ ಇಲಾಖೆಯಲ್ಲಿ 2,000 ಭೂ ಮಾಪಕರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ: ದ್ವಿತೀಯ ಪಿಯು ಆದವರು ಅರ್ಜಿ ಸಲ್ಲಿಸಬಹುದು..

ಬೆಂಗಳೂರು : ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಪರವಾನಗಿ ಭೂಮಾಪಕರುಗಳ ಕೊರತೆ ಇದ್ದು 2,000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ ‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ .
ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 2 ಸಾವಿರ ಲ್ಯಾಂಡ್‌ ಸರ್ವೇಯರ್‌ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಶುಲ್ಕ : ಅರ್ಜಿ ಶುಲ್ಕ 1000 ರೂ.ಗಳಾಗಿದ್ದು, ಇಲಾಖಾ ವೆಬ್‍ಸೈಟ್ http://rdservices.karnataka.gov.inನಲ್ಲಿ ಆನ್‍ಲೈನ್ ಅರ್ಜಿ ಲಿಂಕ್ ಮೂಡುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಕೂಡ ಡೌನ್‍ಲೋಡ್ ಮಾಡಿಕೊಳ್ಳಬಹುದು.
ವಿದ್ಯಾರ್ಹತೆ : ಕನಿಷ್ಠ ಪದವಿಪೂರ್ವ ಶಿಕ್ಷಣ(ಪಿಯುಸಿ) ಅಥವಾ ಕೇಂದ್ರ ಪ್ರೌಢಶಿಕ್ಷಣ ಮಂಡಳಿ ನಡೆಸುವ 12ನೇ ತರಗತಿ ಸಿಬಿಎಸ್‍ಸಿ ಅಥವಾ ಐಸಿಎಸ್‍ಇ ಇವುಗಳಲ್ಲಿ ವಿಜ್ಞಾನ ವಿಷಯ ಪಡೆದು ಗಣಿತ ವಿಷಯದಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರಬೇಕು. ಅಥವಾ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ(ಸಿವಿಲ್)/ಅಥವಾ ಬಿ.ಟೆಕ್(ಸಿವಿಲ್)/ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೇಯಲ್ಲಿ ಪದವಿಪೂರ್ವ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುಬೇಕು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 65 ವರ್ಷ ಮೀರಿರಬಾರದು. ಜಿಲ್ಲಾವಾರು ಅವಶ್ಯಕವಿರುವ ಭೂಮಾಪಕರ ಸಂಖ್ಯೆ ನಿಗದಿಪಡಿಸಿದ್ದು ಅರ್ಹತಾ ಷರತ್ತುಗಳು, ಆಯ್ಕೆಯ ವಿಧಾನ, ತರಬೇತಿ ಸೇರಿದಂತೆ ಇತರೆ ಸೂಚನೆಗಳಿಗೆ ಇಲಾಖಾ ವೆಬ್‍ಸೈಟ್‍ನಲ್ಲಿ ಮಾಹಿತಿ ಪಡೆಯಬಹುದು.
ಭೂ ಮಾಪಕನ ಕೆಲಸ ನಿರ್ವಹಿಸಲು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ ಅಥವಾ ಏಪ್ರಿಲ್ 2023 ರಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷೆಯ ದಿನಾಂಕವನ್ನು ವೆಬ್ ಸೈಟ್ rdservices.karnataka.gov.in ನಲ್ಲಿ ಮತ್ತು ದಿನಪತ್ರಿಕೆಗಳಲ್ಲಿ, 15 ದಿನ ಮುಂಚಿತವಾಗಿ ಪ್ರಕಟಿಸಲಾಗುತ್ತದೆ, ನಿಗದಿಪಡಿಸಲಾದ ಅರ್ಜಿಗಳನ್ನು ಸಲ್ಲಿಸಲು ಲಿಂಕ್ ಅನ್ನು ಮೇಲೆ ತಿಳಿಸಿರುವ ಇಲಾಖಾ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ.

ಅರ್ಜಿಗಳನ್ನು ಆನ್ ಲೈನ್ (Online) ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿಲ್ಲ, ಅಪೂರ್ಣವಾದ ಅಥವಾ ನಿಯಮಗಳನ್ನು ಪಾಲಿಸದ ಅರ್ಜಿಗಳನ್ನು ಮುನ್ಸೂಚನೆ ಇಲ್ಲದೆ ತಿರಸ್ಕರಿಸಲಾಗುವುದು ಎಂದು ತಿಳಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿಗಳನ್ನು  http://rdservices.karnataka.gov.in ನಲ್ಲಿ ದಿನಾಂಕ 20-02-2023 ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು.
ಅರ್ಜಿಯನ್ನು ಆನ್ ಲೈನ್ ಸಲ್ಲಿಸುವ ವಿಧಾನ :ಇಲಾಖಾ ವೆಬ್ ಸೈಟ್ http://rdservices.karnataka.gov.in  ಅನ್ನು ಕ್ಲಿಕ್ ಮಾಡಿದಾಗ ಆನ್ ಲೈನ್ ಅರ್ಜಿ (Engagement of Licensed Surveyors -2023) ಲಿಂಕ್‌ ಮೂಡುತ್ತವೆ. ಹೆಚ್ಚಿನ ವಿರಗಳಿಗೆ ಅಧಿಸೂಚನೆಯನ್ನುನೋಡಲು ಇಲ್ಲಿ Notification-Engagement of Licensed Surveyors-2023   ಕ್ಲಿಕ್‌  ಮಾಡಬಹುದು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

 ಅರ್ಜಿ ಸಲ್ಲಿಸಲು ಕೊನೆಯ ದಿನ 20-02-2023 ರ ಸಂಜೆ 5 ಗಂಟೆಯಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರವನ್ನು ಬಿಳಿ ಹಾಳೆಯ ಮೇಲೆ ಅಂಟಿಸಿ, ಭಾವಚಿತ್ರದ ಕೆಳಗೆ (ಹಾಳೆಯ ಮೇಲೆ ಪೂರ್ಣ ಸಹಿ ಮಾಡಿದ ನಂತರ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು (size 10 to 50 KB) ಸಿದ್ಧತೆ ಮಾಡಿಕೊಳ್ಳಬೇಕು. ಅರ್ಜಿ ತೆರೆಯುವ ಮೊದಲು ಭಾವಚಿತ್ರ ಹಾಗೂ ಸಹಿಯ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಳಿಸಬೇಕು ಮತ್ತು ಅದರ ಸೈಜ್ ನ್ನು ಕಡ್ಡಾಯವಾಗಿ ಖಾತರಿಪಡಿಸಿಕೊಳ್ಳಬೇಕು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement