ಫೆಬ್ರವರಿ ಕೊನೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ: ಬಿ.ಕೆ ಹರಿಪ್ರಸಾದ

ಉಡುಪಿ : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಫೆಬ್ರವರಿ ತಿಂಗಳ ಕೊನೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ ಹೇಳಿದ್ದಾರೆ.
ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿಗಳು ಈಗಾಗಲೇ ನಿನ್ನೆ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ 37 ಜನರ ಸಮ್ಮುಖ ಬಂದಿದ್ದು, ನಿನ್ನೆ ಸಂಜೆ ನಾಲ್ಕು ಗಂಟೆಯವರೆಗೂ ಸುದೀರ್ಘವಾಗಿ ಚರ್ಚೆ ಮಾಡಲಾಗಿದೆ. ಎಲ್ಲರು ಅನಿಸಿಕೆ, ಶಿಫಾರಸುಗಳನ್ನು ಕೊಟ್ಟಿದ್ದಾರೆ, ಮುಂದಿನ ಹಂತದಲ್ಲಿ ಸ್ಕ್ರೀನಿಂಗ್ ಕಮಿಟಿ ಮುಂದೆ ಹೋಗಲಿದೆ. ಸ್ಕ್ರೀನಿಂಗ್ ಕಮಿಟಿಯಲ್ಲಿ ಆಯ್ಕೆಯಾಗಬೇಕು, ಅದರಲ್ಲಿ ಮೂವರು ಎಐಸಿಸಿಯವರು ಇರಲಿದ್ದು ಸ್ಕ್ರೀನಿಂಗ್ ಕಮಿಟಿ ಅಂತಿಮಗೊಳಿಸಿದ ಮೇಲೆ ಸೆಂಟ್ರಲ್ ಎಲೆಕ್ಷನ್ ಕಮಿಟಿಗೆ ಹೋಗುತ್ತದೆ. ಎಐಸಿಸಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಿದೆ ಎಂದರು.
ರಾಕ್ಯದಲ್ಲಿ ಅತಂತ್ರ ಸರ್ಕಾರ ಬಂದರೆ ಕುದುರೆ ವ್ಯಾಪಾರಕ್ಕೆ ಅವಕಾಶವಾಗಲಿದ್ದು ಈ ಬಾರಿ ಯಾವುದೇ ಕಾರಣಕ್ಕೂ ಅತಂತ್ರ ಸರ್ಕಾರ ಬರುವುದಿಲ್ಲವೆಂದು ವಿಶ್ವಾಸವಿದೆ. ಜನರಿಗೆ ಬಿಜೆಪಿ ಸರ್ಕಾರದಿಂದ ಭ್ರಮನಿರಸನವಾಗಿದೆ, ಆದ್ದರಿಂದ ಕಾಂಗ್ರೆಸ್ ಗೆ ಸ್ಪಷ್ಟವಾದ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement