ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಸಾವು

posted in: ರಾಜ್ಯ | 0

ಬೆಂಗಳೂರು : ಬೆಂಗಳೂರಿನ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್ ಸಿಲುಕಿದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಆಸ್ಪತ್ರೆ ತಲುಪಲು ವಿಳಂಬವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಹುದಾ ಕೌಸರ್​​ ಎಂಬ ಒಂದೂವರೆ ವರ್ಷದ ಮಗು ನೆಲಮಂಗಲದ ಬಳಿ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ದೊರಕದೆ ಮೃತಪಟ್ಟಿದೆ. ನಿನ್ನೆ ತುಮಕೂರು ಜಿಲ್ಲೆ ತಿಪಟೂರಿನ ಕೈಮರಾ ಬಳಿ ಬುಲೆರೋ ವಾಹನ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿ ಅಹಮದ್​​, ರುಕ್ಸಾನಾ ದಂಪತಿ ಹಾಗೂ ಪುತ್ರಿ ಹುದಾ ಕೌಸರ್ ಗಾಯಗೊಂಡಿದ್ದರು.
ಈ ವೇಳೆ ತಂದೆ ಅಹಮದ್​​, ತಾಯಿ ರುಕ್ಸಾನಾಗೆ ತಿಪಟೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನ ಹಿಮ್ಸ್​​ ಗೆ ರವಾನಿಸಲಾಗಿತ್ತು. ಬಳಿಕ ಹಿಮ್ಸ್​​​ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಗುವನ್ನು ಬೆಂಗಳೂರಿಗೆ ಜಿರೋ ಟ್ರಾಫಿಕ್ ಮೂಲಕ ನೆಲಮಂಗಲವರೆಗೂ ಆ್ಯಂಬುಲೆನ್ಸ್ ಬೇಗ ಬಂದಿತ್ತು. ಆದರೆ ನೆಲಮಂಗಲ ಬಳಿ ಆಂಬುಲೆನ್ಸ್‌ ಟ್ರಾಫಿಕ್‌ನಲ್ಲಿ ಸಿಲುಕಿದೆ. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಲು ಸಾಧ್ಯವಾಗದೆ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡು ನಡು ರಸ್ತೆಯಲ್ಲೇ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಲಿಂಗಾಯತ, ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ, ಎಸ್‌ಸಿ ಒಳ ಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement