ಮಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರು ಸಾವು, ಒಬ್ಬರಿಗೆ ಗಾಯ

ಮಂಗಳೂರು: ಮಂಗಳೂರು ಸಮೀಪದ ಪಡುಪಣಂಬೂರಿನಲ್ಲಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಾಯಗಳಾಗಿವೆ. ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರಿನಿಂದ ಸುಮಾರು 30 ಕಿಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ಬಬ್ಲು ಮತ್ತು ಅಚಲ್ ಸಿಂಗ್ ಎಂದು ಗುರುತಿಸಲಾಗಿದೆ. ಅನೀಶ್ ಎಂಬ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ವರದಿಗಳ ಪ್ರಕಾರ, ಮೂವರು ಲಾರಿಯಲ್ಲಿ ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳಕ್ಕೆ ತೆರಳುತ್ತಿದ್ದರು. ಪಂಕ್ಚರ್ ಆದ ಲಾರಿಯ ಟೈರ್ ಅನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾಗ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎಂದು ವರದಿಗಳು ತಿಳಿಸಿವೆ.

 

4 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ನಿಮ್ಮ ಕಾಮೆಂಟ್ ಬರೆಯಿರಿ

advertisement