ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡಿರುವ ಹಿನ್ನೆಲೆಯಲ್ಲಿ ದಂಡ ಪಾವತಿಸಲು ಮುಗಿಬಿದ್ದಿದ್ದಾರೆ.
ರಿಯಾಯಿತಿ ಆರಂಭಗೊಂಡ ಮೊದಲ ದಿನವಾದ ನಿನ್ನೆ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ನಗರದ ಸಂಚಾರ ಪೊಲೀಸ್ ಠಾಣೆಗಳಿಗೆ ತೆರಳಿ ಬಾಕಿ ದಂಡದ ಮೊತ್ತ ಪಾವತಿಸಿದ್ದು ಮೊದಲ ದಿನವೇ 5.6 ಕೋಟಿ ಸಂಗ್ರಹವಾಗಿತ್ತು. ಎರಡನೇ ದಿನವಾದ ಶನಿವಾರ ಬರೋಬ್ಬರಿ 6.81 ಕೋಟಿ ರೂ.ದಂಡ ಸಂಗ್ರಹವಾಗಿದೆ.
ಎರಡು ದಿನಗಳ ಒಟ್ಟು ದಂಡ ಸಂಗ್ರಹ 13.81 ಕೋಟಿ ರೂ.ಗಳ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ಪಾವತಿಯಾಗಿದೆ. ಫೆಬ್ರವರಿ 11ರ ಒಳಗೆ ದಂಡ ಪಾವತಿಸಿದರೆ ಮಾತ್ರ ಶೇ.50 ವಿನಾಯಿತಿ ಸಿಗಲಿದೆ. ಅನಂತರ ಬಂದವರಿಗೆ ವಿನಾಯಿತಿ ಇರುವುದಿಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಕರ್ನಾಟಕ ಒನ್ ವೆಬ್‌ಸೈಟ್ ಹಾಗೂ ಪೇಟಿಎಂ ಆ್ಯಪ್‌ನಲ್ಲಿ ಬಾಕಿ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. ಇದರಲ್ಲಿ ವಾಹನ ನೋಂದಣಿ ಸಂಖ್ಯೆ ನಮೂದಿಸಿದರೆ, ಆ ವಾಹನದ ಮೇಲೆ ದಾಖಲಾದ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳ ಸಂಖ್ಯೆ ಹಾಗೂ ರಿಯಾಯಿತಿ ದಂಡದ ಮೊತ್ತ ತೆರೆದುಕೊಳ್ಳಲಿದೆ. ಆನ್‌ಲೈನ್‌ನಲ್ಲಿ ಸಹ ಸಾರ್ವಜನಿಕರು ಆ ದಂಡದ ಮೊತ್ತವನ್ನು ಪಾವತಿಸಬಹುದಾಗಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ