ಕರ್ನಾಟಕ ವಿಧಾನಸಭಾ ಚುನಾವಣೆ 2023; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಬಿಜೆಪಿ ಉಸ್ತುವಾರಿ; ಅಣ್ಣಾಮಲೈ ಸಹ-ಉಸ್ತುವಾರಿ

ಬೆಂಗಳೂರು: ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಉಸ್ತುವಾರಿಯನ್ನಾಗಿ ಶನಿವಾರ ನೇಮಿಸಿದೆ. ಪಕ್ಷದ ಹಿರಿಯ ಸಂಘಟನೆಯ ವ್ಯಕ್ತಿಯಾಗಿರುವ ಪ್ರಧಾನ್ ಅವರು ಈ ಹಿಂದೆ ಹಲವು ಚುನಾವಣೆಗಳ ಜವಾಬ್ದಾರಿ ಹೊತ್ತಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಧರ್ಮೇಂದ್ರ ಪ್ರಧಾನ್‌ ಅವರು ಪಕ್ಷದ ಸಂಘಟನೆಯಲ್ಲು ನುರಿತ ರಾಜಕಾರಣಿಯಾಗಿದ್ದು, ಅವರು ಕರ್ನಾಟಕದಲ್ಲಿ ಪಕ್ಷವು ಅಧಿಕಾರ ಉಳಿಸಿಕೊಳ್ಳುವ ಪ್ರಯತ್ನಗಳನ್ನು ಗರಿಷ್ಠಗೊಳಿಸಲು ಸ್ಥಳೀಯ ಘಟಕದಲ್ಲಿ ಆಂತರಿಕ ಸಮಸ್ಯೆಗಳನ್ನು ವಿಂಗಡಿಸಿ ಅದನ್ನು ಬಗೆಹರಿಸಿ ರಾಜ್ಯ ಸಂಘಟನೆಯನ್ನು ಸಜ್ಜುಗೊಳಿಸುವುದನ್ನು ಪಕ್ಷ ನಿರೀಕ್ಷಿಸುತ್ತಿದೆ.

ಧರ್ಮೇಂದ್ರ ಪ್ರಧಾನ್‌ ಅವರು ಕರ್ನಾಟಕದ ನಾಯಕರು ಮತ್ತು ಕಾರ್ಯಕರ್ತರ ಜತೆಗೆ ಈ ಹಿಂದೆಯೂ ಕೆಲಸ ಮಾಡಿದ್ದಾರೆ. ಅವರ ಜೊತೆಗೆ ಸಹ ಪ್ರಭಾರಿಯಾಗಿ ನೇಮಕವಾಗಿರುವ ಕೆ. ಅಣ್ಣಾಮಲೈ ಅವರು ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿದವರು. ಅವರು ಕರ್ನಾಟಕಕ್ಕೆ ಚಿರಪರಿಚಿತರು. ಕೆ. ಅಣ್ಣಾಮಲೈ ಅವರು ಭಾರತೀಯ ಪೊಲೀಸ್ ಸೇವೆಗೆ 2019ರಲ್ಲಿ ರಾಜೀನಾಮೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಭಾವಿತರಾಗಿ, 2020ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದರು.

ಕರ್ನಾಟಕದಲ್ಲಿ ಈ ವರ್ಷದ ಮಧ್ಯಭಾಗದಲ್ಲಿ ಚುನಾವಣೆ ನಡೆಯಲಿದೆ. ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್ ಎರಡೂ ಎಪ್ರಿಲ್-ಮೇನಲ್ಲಿ ನಡೆಯಲಿರುವ ಚುನಾವಣೆಗಳಿಗೆ ಸಾರ್ವಜನಿಕ ಸಂಪರ್ಕ ಮಾಡುವುದನ್ನು ಪ್ರಾರಂಭಿಸಿವೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement