ಪ್ರಶ್ನಾವಳಿ ಬಿಡುಗಡೆ ಮಾಡಿದ 7ನೇ ರಾಜ್ಯ ವೇತನ ಆಯೋಗ : ಸಲಹೆ, ಅಭಿಪ್ರಾಯ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಮಾಡಲು ರಚಿಸಲಾಗಿರುವ ಏಳನೇ ರಾಜ್ಯ ವೇತನ ಆಯೋಗವು ಪ್ರಶ್ನಾವಳಿ ಬಿಡುಗಡೆ ಮಾಡಿದ್ದು ಸಲಹೆ, ಅಭಿಪ್ರಾಯಗಳನ್ನು ಸೂಚಿತ ದಿನಾಂಕ ಫೆ.10ರೊಳಗೆ ಸಲ್ಲಿಸಬಹುದಾಗಿದೆ.
ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾ ಅಂಶಗಳಿಗೆ ಸಾರ್ವಜನಿಕರು, ಸೇವಾ ಸಂಘಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು, ಇಲಾಖೆಗಳಿಂದ ಮಾಹಿತಿ, ಅನಿಸಿಕೆ ಹಾಗೂ ಮುಕ್ತ ಸಲಹೆ ಪಡೆಯುವ ಉದ್ದೇಶದಿಂದ ವಿವಿಧ ಪ್ರಶ್ನಾವಳಿಗಳನ್ನು ಜನವರಿ 17ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.
ಈ ಪ್ರಶ್ನಾವಳಿಗಳು ಆಯೋಗದ ವೆಬ್‍ಸೈಟ್ 7spc.karnataka.gov.in ನಲ್ಲಿ ಲಭ್ಯವಿದ್ದು, ಪ್ರಶ್ನಾವಳಿಗಳಿಗೆ ಉತ್ತರ ಹಾಗೂ ಸಲಹೆಗಳನ್ನು ಫೆಬ್ರವರಿ 10ರೊಳಗೆ ಸಲ್ಲಿಸಲು ಕೋರಲಾಗಿದೆ. (ಪಿಡಿಎಫ್‌ ನೋಡಲು ಇಲ್ಲಿ ಕ್ಲಿಕ್‌ ಮಾಡಬಹುದು- 7th pay commission-karnataka )
ರಾಜ್ಯ ಸರ್ಕಾರವು, ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳ ನೌಕರರು ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ ವೇತನ, ತುಟ್ಟಿಭತ್ಯೆ ಮತ್ತು ಇತರೆ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ಪರಿಷ್ಕರಿಸಿ ಸರ್ಕಾರಕ್ಕೆ ವರದಿ ನೀಡಲು 7ನೇ ವೇತನ ಆಯೋಗವನ್ನು ರಚಿಸಲಾಗಿದೆ.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement