ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ, ಬೆಂಗಳೂರು, ತುಮಕೂರಿನ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ, ಸೋಮವಾರ (ಫೆಬ್ರವರಿ 6) ಬೆಂಗಳೂರು, ತುಮಕೂರು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಾಳೆ, ಫೆಬ್ರವರಿ 6ರಂದು ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಬೆಳಿಗ್ಗೆ 11ಕ್ಕೆ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಜನರು, 8,000 ಹೊರ ದೇಶದ ಪ್ರತಿನಿಧಿಗಳು, 500ಕ್ಕೂ ಹೆಚ್ಚು ಭಾಷಣಕಾರರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಹಾಲ್ ಎರಡರ ಉದ್ಘಾಟನೆಯನ್ನು ಮೋದಿಯವರು ಮಾಡಲಿದ್ದಾರೆ. ನಂತರ ದೇಶ ಹಾಗೂ ವಿದೇಶಿ ಗಣ್ಯರ ಜೊತೆಗೆ ಸಮಾಲೋಚನೆ ಮಾಡಲಿದ್ದಾರೆ.
ಈಗಾಗಲೇ ಕಾರ್ಯಕ್ರಮದ ಭದ್ರತೆಗೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಎಲ್ಲಾ ಕಡೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮೋದಿ ಬರುವ ವೇಳೆ ಕೆಲಕಾಲ ಟ್ರಾಫಿಕ್ ನಿಯಂತ್ರಣ ಮಾಡುವುದಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಆಯೋಜಕರಿಂದ ಪಾಸ್ ಪಡೆದವರಿಗೆ ಮಾತ್ರ ಪ್ರವೇಶವಿದೆ.
ಬೆಂಗಳೂರಿನ ಕಾರ್ಯಕ್ರಮ ಮುಗಿಸಿಕೊಂಡು ತುಮಕೂರಿನ ಗುಬ್ಬಿ ತಾಲೂಕಿನ ಬಿದರಿಳ್ಳದಲ್ಲಿ 615 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಅತಿದೊಡ್ಡ ಎಚ್‌ಎಎಲ್‌ ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ತುಮಕೂರು ಕೈಗಾರಿಕಾ ಟೌನ್ಶಿಪ್ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ತಿಪಟೂರು, ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ ಶುದ್ಧ ಕುಡಿಯುವ ನೀರು ಒದಗಿಸುವ 2 ಜಲಜೀವನ್ ಮಿಶನ್ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಒಂದೇ ದಿನದಲ್ಲಿ 6 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement